ಬೆಂಗಳೂರು : ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ಸೋನಲ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪ್ರೀ-ವೆಡ್ಡಿಂಗ್ ವಿಡಿಯೋ ಹಂಚಿಕೊಳ್ಳಲಾಗಿದೆ.
ಈ ವಿಡಿಯೋವನ್ನು ಚಿತ್ರಮಂದಿರದಲ್ಲಿ ಶೂಟ್ ಮಾಡಲಾಗಿದ್ದು. ಇಬ್ಬರೂ ಗಮನ ಸೆಳೆದಿದ್ದಾರೆ. ಕಪ್ಪು ಬಣ್ಣ ಮತ್ತು ಲೈಟ್ ಬಣ್ಣದ ಉಡುಗೆಯಲ್ಲಿ ಚೆಂದದ ಫೋಟೋಶೂಟ್ ಮಾಡಿಸಿ ಮದುವೆ ಬಗ್ಗೆ ಇಬ್ಬರೂ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ವದಂತಿಗಳಿಗೆ ತರುಣ್ ಮತ್ತು ಸೋನಲ್ ತೆರೆ ಎಳೆದಿದ್ದಾರೆ. ಇದೇ ಆಗಸ್ಟ್ ೧೦ ರಂದು ಸೋನಲ್ ಮತ್ತು ತರುಣ್ ಸುಧೀರ್ ಆರತಕ್ಷತೆ, ಆಗಸ್ಟ್ ೧೧ ರಂದು ಮದುವೆ ನಡೆಯಲಿದೆ. ಬೆಂಗಳೂರಿನ ಕೆಂಗೇರಿ ಬಳಿ ಇರುವ ಪೂರ್ಣಿಮಾ ಕನ್ವೆಷನ್ ಹಾಲ್ ನಲ್ಲಿ ವಿವಾಹ ನಡೆಯಲಿದೆ.
ಇನ್ನು ಇವರಿಬ್ಬರ ಪ್ರೀ ವೆಡ್ಡಿಂಗ್ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಎಲ್ಲಾ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಜೊತೆಗೆ ಇಬ್ಬರಿಗೂ ಕಾಮೆಂಟ್ ಮೂಲಕ ಶುಭಾಶಯ ಕೋರುತ್ತಿದ್ದಾರೆ.
ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ ಮಡಿಕೇರಿ: ಡಿ.೨೦…
ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…