Mysore
26
haze

Social Media

ಗುರುವಾರ, 29 ಜನವರಿ 2026
Light
Dark

ಆದಿಪುರುಷ್ ಚಿತ್ರದವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಅಮಿತ್ ಶಾಗೆ ಪತ್ರ ಬರೆದ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘ!

ನವದೆಹಲಿ: ಆದಿಪುರುಷ್ ಚಿತ್ರದ ನಿರ್ದೇಶಕ ಓಂ ರಾವುತ್ ಮತ್ತು ಮನೋಜ್ ಮುಂತಾಶಿರ್ ವಿರುದ್ಧ ಕೂಡಲೇ ಎಫ್ಐಆರ್ ದಾಖಲಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ಪತ್ರ ಬರೆದಿದೆ.

ಆದಿಪುರುಷ್ ಚಿತ್ರ ಬಿಡುಗಡೆಗೊಂಡ ಪ್ರಾರಂಭದಿಂದಲೂ ಸಾಕಷ್ಟು ವಿವಾದಗಳಿಗೆ ಕಾರಣವಾಗಿದೆ. ಸದ್ಯ ಇದೇ ಕಾರಣವನ್ನು ಮುಂದಿಟ್ಟು ಮಾತನಾಡಿರುವ ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್, ಚಿತ್ರದ ನಿರ್ದೇಶಕ ಓಂ ರಾವುತ್ ಮತ್ತು ನಿರ್ಮಾಪಕರ ವಿರುದ್ಧ ಎಫ್​ಐಆರ್​ ದಾಖಲಿಸಲು ಆಗ್ರಹಿಸಿದೆ.

ಆದಿಪುರುಷ್​ ಚಿತ್ರದ ವಿರುದ್ಧ ಭುಗಿಲೆದ್ದಿರುವ ಆಕ್ರೋಶ, ಪ್ರತಿಭಟನೆಗಳು ಸದ್ಯ ಕೊನೆಗೊಳ್ಳುವಂತೆ ಕಾಣುತ್ತಿಲ್ಲ ಎಂಬುದು ಇತ್ತೀಚಿನ ವರದಿಗಳ ಮೂಲಕ ಸ್ಪಷ್ಟವಾಗುತ್ತಿದೆ. ಶನಿವಾರ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಚಿತ್ರತಂಡ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಮತ್ತು ಅನೇಕ ಮಲ್ಟಿಪ್ಲೆಕ್ಸ್‌ಗಳಲ್ಲಿ ರಿಯಾಯಿತಿ ಟಿಕೆಟ್‌ಗಳನ್ನು ಮಾರಾಟ ಮಾಡುವ ಮೂಲಕ ಹಣ ಗಳಿಸುವ ಪ್ರಯತ್ನವನ್ನು ನಡೆಸಿದೆ. ಹಾಗಾಗಿ ಚಿತ್ರದ ನಿರ್ಮಾಪಕರ ವಿರುದ್ಧ ಪ್ರಕರಣವನ್ನು ದಾಖಲಿಸುವಂತೆ ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ಒತ್ತಾಯಿಸಿದೆ.

ಬೇಸರ ಮೂಡಿಸುವ ವಿಎಫ್‌ಎಕ್ಸ್‌, ಸ್ವೀಕರಿಸಲಾಗದಂತ ಡೈಲಾಗ್​​ಗಳು ಆದಿಪುರುಷ್‌ ಚಿತ್ರಕ್ಕೆ ಭಾರಿ ಹಿನ್ನಡೆಯನ್ನು ನೀಡಿದೆ! ಈಗಾಗಲೇ ಸಿನಿಮಾವನ್ನು ಹಲವು ಚಿತ್ರಮಂದಿರಗಳಿಂದ ಪ್ರದರ್ಶನವನ್ನು ಸ್ಥಗಿತಗೊಳಿಸಲಾಗಿದ್ದು, ಚಿತ್ರದ ವಿರುದ್ಧ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿವೆ,

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!