ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದ ಕಾಂತಾರ ಸಿನಿಮಾ ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ಕಾಂತಾರ ಚಿತ್ರದ ಭಾಗ ಒಂದರ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ.
ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಪ್ರೀಕ್ವೆಲ್ ಮಾಡಲು ಮುಂದಾಗಿರೋದು ತಿಳಿದಿದೆ. ಇದೀಗ ಕಾಂತಾರ ಸಿನಿಮಾದ ಭಾಗ- 1ರ ಫಸ್ಟ್ಲುಕ್ಕನ್ನು ನವೆಂಬರ್ 27 ರಂದು 12 ಗಂಟೆ 25 ನಿಮಿಷಕ್ಕೆ ರಿಲೀಸ್ ಮಾಡುವುದಾಗಿ ಚಿತ್ರತಂಡ ಮಾಹಿತಿ ನೀಡಿದೆ.
ಈಗಾಗಲೆ ಚಿತ್ರದ ಬಹುಪಾಲು ಚಿತ್ರೀಕರಣ ಮುಗಿದಿದ್ದು, ಉಳಿದ ಕೆಲವು ಭಾಗವನ್ನು ಕರಾವಳಿ ಮತ್ತು ಮಲೆನಾಡಿನ ಹಲವಾರು ಪ್ರದೇಶಗಳಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ.





