ಬೆಂಗಳೂರು : ಹಸುವಿನ ಮಾಂಸ ತ್ಯಾಜ್ಯ ಸಾಗಿಸುತ್ತಿದ್ದ ಟ್ರಕ್ ಚಾಲಕನ ವಿರುದ್ಧ ಬೆಂಗಳೂರು ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ನಟಿ ಐಂದ್ರಿತಾ ರೇ ಆರೋಪಿಸಿದ್ದರು. ಕನ್ನಡದ ನಟಿಯ ಈ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಸತ್ಯಾಸತ್ಯತೆ ಪರಿಶೀಲಿಸಿದ್ದು, ಪ್ರಾಣಿಗಳ ಮಾಂಸ ತ್ಯಾಜ್ಯ ಹಸುವಿನದ್ದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅದಲ್ಲದೇ ಪ್ರಾಣಿಗಳ ಮಾಂಸ ತ್ಯಾಜ್ಯ ಸಾಗಿಸುತ್ತಿದ್ದವರು ಬಿಬಿಎಂಪಿಯಿಂದ ಲೈಸೆನ್ಸ್ ಪಡೆದ ವ್ಯಾಪಾರಿ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಅವರು, ಪ್ರಾಣಿಗಳ ಮಾಂಸ ತ್ಯಾಜ್ಯ ಹಸುವಿನದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಯಿತು. ವಾಹನದಲ್ಲಿ ಸಿಕ್ಕಿರುವ ಮೂಳೆಗಳು, ಕೊಂಬುಗಳು, ಚರ್ಮಗಳು ಮತ್ತು ಪ್ರಾಣಿಗಳ ಮಾಂಸ ತ್ಯಾಜ್ಯ ಹಸುಗಳದ್ದಲ್ಲ ಎಂಬುದು ದೃಢಪಟ್ಟಿದೆ ಎಂದು ಹೇಳಿದ್ದಾರೆ.
ಅದಲ್ಲದೇ, ಪ್ರಾಣಿಗಳ ಮಾಂಸ ತ್ಯಾಜ್ಯ ಸಾಗಾಟ ಮಾಡುತ್ತಿದ್ದ ವ್ಯಾಪಾರಿ ಬಿಬಿಎಂಪಿಯ ಪೂರ್ವ ಪಶು ಸಂಗೋಪನೆ ಇಲಾಖೆಯಿಂದ ಅನುಮತಿ ಪಡೆದಿದ್ದು, ಅಧಿಕೃತ ಕಸಾಯಿಖಾನೆಯಿಂದ ಮಾಂಸ ತ್ಯಾಜ್ಯ ಸಾಗಾಟ ಮಾಡಲಾಗುತ್ತಿದೆ ಎಂದು ಡಿಸಿಪಿ ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.
ಡಿಸಿಪಿ ಸಿಕೆ ಬಾಬಾ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ನಾಗರಿಕರೊಬ್ಬರು ಈ ರೀತಿ ಉಪದ್ರವ ಸೃಷ್ಟಿಸಲು ಪ್ರಯತ್ನಿಸಿದವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಹೇಳಿದ್ದಾರೆ.
ಐಂದ್ರಿತಾ ರೇ ಅವರು ಸೆಪ್ಟೆಂಬರ್ 6 ರಂದು ತಮ್ಮ ಎಕ್ಸ್ (ಹಿಂದಿನ ಟ್ವಿಟರ್) ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಪ್ರಾಣಿಗಳ ಮಾಂಸ ತ್ಯಾಜ್ಯ ತುಂಬಿಕೊಂಡಿರುವ ಟ್ರಕ್ ಇತ್ತು. ಶಂಕಿತ ಹಸುವಿನ ಮಾಂಸ ತ್ಯಾಜ್ಯವನ್ನು ಸಾಗಾಟ ಮಾಡಲಾಗುತ್ತಿದೆ. ಸದ್ಯ ಟ್ರಕ್ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…