ಸ್ಯಾಂಡಲ್ ವುಡ್ ನ ರಾಕಿಂಗ್ ಕಪಲ್ ಯಶ್ ಹಾಗೂ ರಾಧಿಕಾ ಪಂಡಿತ್ ಪುತ್ರ ಯಥರ್ವ್ ನ 4ನೇ ವರ್ಷದ ಹುಟ್ಟುಹಬ್ಬ ಆಚರಣೆಯ ವಿಡಿಯೋವನ್ನು ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಮಗನ ಹುಟ್ಟುಹಬ್ಬವನ್ನು ರಾಕಿಂಗ್ ದಂಪತಿ ಬಹಳ ಅದ್ದೂರಿಯಾಗಿ ಆಚರಿಸಿದ್ದಾರೆ. ಸದ್ಯ ಮಗನ ಹುಟ್ಟುಹಬ್ಬದ ವಿಡಿಯೋವನ್ನು ನಟಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಯಶ್ ದಂಪತಿ ಮಗಳು ಐರಾ ಹಾಗೂ ಮಗ ಯಥರ್ವ್ ಹುಟ್ಟುಹಬ್ಬವನ್ನು ಪ್ರತಿ ವರ್ಷವೂ ಕೂಡ ಬಹಳ ವಿಜೃಂಭಣೆಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಗನ ಹುಟ್ಟುಹಬ್ಬವನ್ನು ಖಾಸಗಿ ಹೋಟೆಲ್ ಒಂದರಲ್ಲಿ ಅದ್ದೂರಿಯಾಗಿ ಸೆಲೆಬ್ರೇಟ್ ಮಾಡಿದ್ದಾರೆ.
ಖಾಸಗಿ ಹೋಟೆಲ್ ನಲ್ಲಿ ಹುಟ್ಟು ಹಬ್ಬ ಆಚರಣೆ ಮಾಡಲಾಗಿದ್ದು, ರಾಕಿಂಗ್ ದಂಪತಿ ತಮ್ಮ ಮಕ್ಕಳೊಟ್ಟಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ.ಇನ್ನೂ ಯಥರ್ವ್ ಅಕ್ಕ ಐರಾ ಕೂಡ ಖುಷಿಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ.
ಬಾಲ ಹನುಮಾನ್ ಥೀಮ್ ನಲ್ಲಿ ಯಥರ್ವ್ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಹಾಗೂ ಆಪ್ತರು ಭಾಗಿಯಾಗಿದ್ದರು.
ಅಕ್ಟೋಬರ್ 30ರಂದು ರಾಕಿಂಗ್ ದಂಪತಿ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದು, ಅದರ ವಿಡಿಯೋ ತುಣುಕನ್ನು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಯಥರ್ವ್ ಹುಟ್ಟುಹಬ್ಬದ ವಿಡಿಯೋಗೆ ಅಭಿಮಾನಿಗಳಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜೂನಿಯರ್ ಯಶ್ ಗೆ ಶುಭ ಕೋರಿದ್ದಾರೆ.
ಕೆಜಿಎಫ್ ಸರಣಿ ಸಿನಿಮಾಗಳು ತೆರೆಕಂಡು ಒಂದುವರೆ ವರ್ಷ ಕಳೆದರೂ ಯಶ್ ಮುಂದಿನ ಸಿನಿಮಾ ಬಗ್ಗೆ ಯಾವುದೇ ಅಪ್ಡೇಟ್ ಸಿಕ್ಕಿಲ್ಲ. ಯಶ್ 19 ಬಗ್ಗೆಯೂ ಕೂಡ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಸದ್ಯ ಯಶ್ ಈ ಸಿನಿಮಾ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗುತ್ತಿದೆ.