Mysore
20
overcast clouds
Light
Dark

ರಾಮಾಯಣಕ್ಕೂ ‘ಆದಿಪುರುಷ್’ ಸಿನಿಮಾಗೂ ಸಂಬಂಧವಿಲ್ಲ : ವರಸೆ ಬದಲಿಸಿದ ಚಿತ್ರತಂಡ

ಬಾಹುಬಲಿ ಪ್ರಭಾಸ್, ಕೃತಿ ಸನೋನ್ ನಟನೆಯ ‘ಆದಿಪುರುಷ್’ ಜೂನ್ 16ಕ್ಕೆ ರಿಲೀಸ್ ಆಗಿದೆ. ಚಿತ್ರದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ಬಗ್ಗೆ ಬಗೆ ಬಗೆಯ ರೀತಿಯಲ್ಲಿ ಚರ್ಚೆ ನಡೆಯುತ್ತಿದ್ದರೆ, ಚಿತ್ರತಂಡದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಇದೀಗ ಸಿನಿಮಾ ಬಗ್ಗೆ ವರಸೆ ಬದಲಿಸಿದ್ದಾರೆ. ರಾಮಾಯಣಕ್ಕೂ ಆದಿಪುರುಷ್ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಅಂತಾ ಹೇಳಿಕೆ ನೀಡಿದ್ದಾರೆ.

ಓಂ ರಾವತ್ ನಿರ್ದೇಶನದ ‘ಆದಿಪುರುಷ್’ ಸಿನಿಮಾಗೆ ಕೆಟ್ಟ ವಿಮರ್ಶೆ ವ್ಯಕ್ತವಾಗುತ್ತಿದೆ. ಈ ಸಿನಿಮಾದ ಹಲವು ಅಂಶಗಳನ್ನು ಟೀಕಿಸಲಾಗುತ್ತಿದೆ. ರಾಮಾಯಣವನ್ನು ಆಧರಿಸಿದ ಈ ಚಿತ್ರದಲ್ಲಿ ಪ್ರಭಾಸ್ ಅವರು ರಾಮನ ಪಾತ್ರ ಮಾಡಿದ್ದಾರೆ. ಸೀತೆಯಾಗಿ ಕೃತಿ ಸನೋನ್ ಕಾಣಿಸಿಕೊಂಡಿದ್ದಾರೆ. ಆಂಜನೇಯನಾಗಿ ದೇವದತ್ತ ನಾಗೆ ಅವರು ಅಭಿನಯಿಸಿದ್ದಾರೆ. ಲಕ್ಷ್ಮಣನ ಪಾತ್ರಕ್ಕೆ ಸನ್ನಿ ಸಿಂಗ್ ಅವರು ಬಣ್ಣ ಹಚ್ಚಿದ್ದಾರೆ. ಸೈಫ್ ಅಲಿ ಖಾನ್ ಅವರು ರಾವಣನಾಗಿ ಅಬ್ಬರಿಸಿದ್ದಾರೆ. ಆದರೆ ರಾಮಾಯಣವನ್ನು ತೋರಿಸಿದ ರೀತಿ ಸರಿಯಾಗಿಲ್ಲ ಎಂದು ಪ್ರೇಕ್ಷಕರು ತಕರಾರು ತೆಗೆದಿದ್ದಾರೆ.

ಸೈಫ್‌ರನ್ನ ಮಾಡ್ರನ್ ರಾವಣನಂತೆ ತೋರಿಸಿರೋದು ಟ್ರೋಲ್ ಆಗುತ್ತಿದೆ. ಸಿನಿಮಾ ನೈಜವಾಗಿ ತೋರಿಸಿಲ್ಲ ಎಂದು ಟೀಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿನಿಮಾದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಮಾತು ಬದಲಾಯಿಸಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ‘ಆದಿಪುರುಷ್’ ಸಿನಿಮಾವನ್ನು ಟ್ರೋಲ್ ಮಾಡಲಾಗುತ್ತಿದೆ. ಪಾತ್ರಗಳನ್ನು ತೋರಿಸಿದ ರೀತಿ, ಗ್ರಾಫಿಕ್ಸ್ ಗುಣಮಟ್ಟ ಸೇರಿದಂತೆ ಅನೇಕ ವಿಚಾರಗಳನ್ನು ಜನರು ಟೀಕಿಸುತ್ತಿದ್ದಾರೆ. ಈ ನಡುವೆ ಸಂಭಾಷಣಕಾರ ಮನೋಜ್ ಮುಂತಶೀರ್ ಅವರು ನೀಡಿದ ಕೇಳಿಕೆ ಸೆನ್ಸೇಷನ್ ಕ್ರಿಯೆಟ್ ಮಾಡಿದೆ. ಇದನ್ನು ನಾನು ಮೊದಲೇ ಹೇಳಿದ್ದೇ ಮತ್ತು ಈಗಲೂ ಹೇಳುತ್ತೇನೆ. ಈ ಸಿನಿಮಾದ ಹೆಸರು ಆದಿಪುರುಷ್. ನಾವು ರಾಮಾಯಣವನ್ನು ಸಿನಿಮಾ ಮಾಡಿಲ್ಲ. ರಾಮಾಯಾಣಕ್ಕೂ ಆದಿಪುರುಷ್‌ ಸಿನಿಮಾಗೂ ಸಂಬಂಧವಿಲ್ಲ. ಅದರಿಂದ ತುಂಬ ಸ್ಫೂರ್ತಿ ಪಡೆದಿದ್ದೇವೆ. ಡಿಸ್‌ಕ್ಲೈಮರ್‌ನಲ್ಲೂ ನಾವು ಅದನ್ನೇ ಹೇಳಿದ್ದೇವೆ ಎಂದು ಮನೋಜ್ ಮುಂತಶೀರ್ ಹೇಳಿದ್ದಾರೆ.

ಚಿತ್ರತಂಡದ ನಡೆಗೆ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಸಿನಿಮಾ ಕಂಟೆಂಟ್ ವಿಷ್ಯವಾಗಿ ಸುದ್ದಿಯಾಗೋದ್ದಕ್ಕಿಂತ ಟ್ರೋಲ್ ಮಚಾರವಾಗಿಯೇ ಭಾರಿ ಸದ್ದು ಮಾಡುತ್ತಿದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ