ಮುಂಬಯಿ: ದಿನಕಳೆದಂತೆ ʼದಿ ಕೇರಳ ಸ್ಟೋರಿʼ ಸಿನಿಮಾದ ಬಗೆಗಿನ ಚರ್ಚೆ ಹೆಚ್ಚಾಗುತ್ತಿದೆ. ಒಂದೆಡೆ ಸಿನಿಮಾದ ಬಗ್ಗೆ ಪಾಸಿಟಿವ್ ಮಾತುಗಳು ಕೇಳಿ ಬಂದರೆ, ಇನ್ನೊಂದೆಡೆ ಸಿನಿಮಾದ ಬಗ್ಗೆ ಮೊದಲೇ ಕೇಳಿ ಬಂದ ನೆಗೆಟಿವ್ ಟಾಕ್ಸ್ ಇನ್ನಷ್ಟು ಹೆಚ್ಚಾಗಿದೆ.
ಈ ಎರಡರ ನಡುವೆಯೂ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಗಳಿಕೆ ಕಾಣುವತ್ತ ಮುಂದುವರೆಯುತ್ತಿದೆ. ʼದಿ ಕೇರಳ ಸ್ಟೋರಿʼ ಸಿನಿಮಾದಲ್ಲಿ ಕೆಲಸ ಮಾಡಿದ ವ್ಯಕ್ತಿಗೆ ಅಪರಿಚಿತ ನಂಬರ್ ನಿಂದ ಬೆದರಿಕೆ ಸಂದೇಶ ಬಂದಿದೆ ಎಂದು ನಿರ್ದೇಶಕ ಸುದೀಪ್ತೋ ಸೇನ್ ಹೇಳಿದ್ದಾರೆ.
“ನೀವು ಒಳ್ಳೆಯದನ್ನು ಮಾಡಲಿಲ್ಲ, ಮನೆಯಿಂದ ಒಂಟಿಯಾಗಿ ಹೊರಬರಬೇಡಿ. ಎಂದು ವ್ಯಕ್ತಿಯೊಬ್ಬ ಅಪರಿಚಿತ ನಂಬರ್ ನಿಂದ ತಮ್ಮ ತಂಡದ ಸದಸ್ಯನಿಗೆ ಸಂದೇಶ ಕಳುಹಿಸಿದ್ದಾನೆ ಎಂದು ಪೊಲೀಸರಿಗೆ ಸುದೀಪ್ತೋ ಸೇನ್ ಹೇಳಿದ್ದಾರೆ.
ಸದ್ಯ ಸಿನಿಮಾ ತಂಡದ ಸದಸ್ಯನಿಗೆ ಪೊಲೀಸರು ಭದ್ರತೆ ನೀಡಿದ್ದು, ಈ ಬಗ್ಗೆ ಯಾವುದೇ ಎಫ್ ಐಆರ್ ದಾಖಲಾಗಿಲ್ಲ ಎಂದು ವರದಿ ತಿಳಿಸಿದೆ.
ಕೇರಳದ ಯುವತಿಯೊಬ್ಬಳು ಮದುವೆಯ ನಂತರ ಇಸ್ಲಾಂಗೆ ಮತಾಂತರಗೊಂಡ ನಂತರ ಐಸಿಸ್ ಶಿಬಿರಗಳಿಗೆ ಕಳ್ಳಸಾಗಣೆಯಾಗುವ ಕಥೆಯನ್ನು ಚಿತ್ರ ಹೇಳುತ್ತದೆ. ಈ ರೀತಿ 32 ಸಾವಿರ ಹಿಂದೂ ಮಹಿಳೆಯರು ಮತಾಂತರಗೊಂಡು ಐಸಿಸ್ ಸೇರಿದ್ದಾರೆ ಎಂದು ಚಿತ್ರ ತಂಡ ತನ್ನ ಟೀಸರ್ ನಲ್ಲಿ ಹೇಳಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ ಇದು 32 ಸಾವಿರ ಬದಲಿಗೆ 3 ಮಹಿಳೆಯರು ಎಂದು ಚಿತ್ರತಂಡ ಬದಲು ಮಾಡಿತ್ತು.
ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ʼದಿ ಕೇರಳ ಸ್ಟೋರಿʼ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.
ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…
ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…
ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…