ಚಿತ್ರ ಮಂಜರಿ

ʼದಿ ಕೇರಳ ಸ್ಟೋರಿʼ ತಂಡದ ಸದಸ್ಯನಿಗೆ ಬೆದರಿಕೆ ಸಂದೇಶ: ದೂರು ದಾಖಲಿಸಿದ ನಿರ್ದೇಶಕ ಸೇನ್‌

ಮುಂಬಯಿ: ದಿನಕಳೆದಂತೆ ʼದಿ ಕೇರಳ ಸ್ಟೋರಿʼ ಸಿನಿಮಾದ ಬಗೆಗಿನ ಚರ್ಚೆ ಹೆಚ್ಚಾಗುತ್ತಿದೆ. ಒಂದೆಡೆ ಸಿನಿಮಾದ ಬಗ್ಗೆ ಪಾಸಿಟಿವ್‌ ಮಾತುಗಳು ಕೇಳಿ ಬಂದರೆ, ಇನ್ನೊಂದೆಡೆ ಸಿನಿಮಾದ ಬಗ್ಗೆ ಮೊದಲೇ ಕೇಳಿ ಬಂದ ನೆಗೆಟಿವ್‌ ಟಾಕ್ಸ್‌ ಇನ್ನಷ್ಟು ಹೆಚ್ಚಾಗಿದೆ.

ಈ ಎರಡರ ನಡುವೆಯೂ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಗಳಿಕೆ ಕಾಣುವತ್ತ ಮುಂದುವರೆಯುತ್ತಿದೆ. ʼದಿ ಕೇರಳ ಸ್ಟೋರಿʼ ಸಿನಿಮಾದಲ್ಲಿ ಕೆಲಸ ಮಾಡಿದ ವ್ಯಕ್ತಿಗೆ ಅಪರಿಚಿತ ನಂಬರ್‌ ನಿಂದ ಬೆದರಿಕೆ ಸಂದೇಶ ಬಂದಿದೆ ಎಂದು ನಿರ್ದೇಶಕ ಸುದೀಪ್ತೋ ಸೇನ್ ಹೇಳಿದ್ದಾರೆ.

“ನೀವು ಒಳ್ಳೆಯದನ್ನು ಮಾಡಲಿಲ್ಲ, ಮನೆಯಿಂದ ಒಂಟಿಯಾಗಿ ಹೊರಬರಬೇಡಿ. ಎಂದು ವ್ಯಕ್ತಿಯೊಬ್ಬ ಅಪರಿಚಿತ ನಂಬರ್‌ ನಿಂದ ತಮ್ಮ ತಂಡದ ಸದಸ್ಯನಿಗೆ ಸಂದೇಶ ಕಳುಹಿಸಿದ್ದಾನೆ ಎಂದು ಪೊಲೀಸರಿಗೆ ಸುದೀಪ್ತೋ ಸೇನ್ ಹೇಳಿದ್ದಾರೆ.

ಸದ್ಯ ಸಿನಿಮಾ ತಂಡದ ಸದಸ್ಯನಿಗೆ ಪೊಲೀಸರು ಭದ್ರತೆ ನೀಡಿದ್ದು, ಈ ಬಗ್ಗೆ ಯಾವುದೇ  ಎಫ್‌ ಐಆರ್‌ ದಾಖಲಾಗಿಲ್ಲ ಎಂದು ವರದಿ ತಿಳಿಸಿದೆ.

ಕೇರಳದ ಯುವತಿಯೊಬ್ಬಳು ಮದುವೆಯ ನಂತರ ಇಸ್ಲಾಂಗೆ ಮತಾಂತರಗೊಂಡ ನಂತರ ಐಸಿಸ್ ಶಿಬಿರಗಳಿಗೆ ಕಳ್ಳಸಾಗಣೆಯಾಗುವ ಕಥೆಯನ್ನು ಚಿತ್ರ ಹೇಳುತ್ತದೆ. ಈ ರೀತಿ 32 ಸಾವಿರ ಹಿಂದೂ ಮಹಿಳೆಯರು ಮತಾಂತರಗೊಂಡು ಐಸಿಸ್ ಸೇರಿದ್ದಾರೆ ಎಂದು ಚಿತ್ರ ತಂಡ ತನ್ನ ಟೀಸರ್‌ ನಲ್ಲಿ ಹೇಳಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ ಇದು 32 ಸಾವಿರ ಬದಲಿಗೆ 3 ಮಹಿಳೆಯರು ಎಂದು ಚಿತ್ರತಂಡ ಬದಲು ಮಾಡಿತ್ತು.

ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ʼದಿ ಕೇರಳ ಸ್ಟೋರಿʼ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

6 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

6 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

7 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

9 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

13 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

13 hours ago