ಚಿತ್ರ ಮಂಜರಿ

ಪ್ರತಿಷ್ಠಿತ ಮೂರು ಪ್ರಶಸ್ತಿ ಬಾಚಿಕೊಂಡ ‘RRR’ ಸಿನಿಮಾ

ನವದೆಹಲಿ: ರಾಜ ಮೌಳಿ ನಿರ್ದೇಶನದ, ಈ ವರ್ಷ ತೆರೆಕಂಡು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿರುವ ‘ಆರ್.ಆರ್.ಆರ್’  ಸಿನಿಮಾಗೆ ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್’ನಲ್ಲಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಮೊನ್ನೆಯಷ್ಟೇ ಈ ಸಿನಿಮಾ ನಾಮನಿರ್ದೇಶನಕ್ಕೆ ಆಯ್ಕೆಯಾಗಿದ್ದನ್ನು ಚಿತ್ರತಂಡ ಹಂಚಿಕೊಂಡಿತ್ತು. ಇದೀಗ ಮೂರು ಪ್ರಶಸ್ತಿಗಳನ್ನು ಅದು ಪಡೆದುಕೊಂಡಿದೆ. ಈ ವಿಷಯವನ್ನು ಸ್ವತಃ ಚಿತ್ರತಂಡವೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ.

ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್ ಸಂಸ್ಥೆಯು ಆರ್.ಆರ್.ಆರ್ ಸಿನಿಮಾಗೆ ಅತ್ಯುತ್ತಮ ವಿದೇಶಿ ಸಿನಿಮಾ, ಅತ್ಯುತ್ತಮ ಸಂಗೀತ ಸಂಯೋಜನೆ ಮತ್ತು ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಗಳನ್ನು ನೀಡಿರುವ ಸಂಸ್ಥೆಗೆ ರಾಜಮೌಳಿ ಅಂಡ್ ಟೀಮ್ ಧನ್ಯವಾದಗಳನ್ನು ಅರ್ಪಿಸಿದೆ. 

ಆರ್.ಆರ್.ಆರ್ ಸಿನಿಮಾ ಐದು ವಿಭಾಗಗಳಲ್ಲಿ ನಾಮಿನೇಷನ್ ಪಟ್ಟಿಯಲ್ಲಿತ್ತು. ಅದರಲ್ಲಿ ಮೂರು ಪ್ರಶಸ್ತಿಗಳನ್ನು ಅದು ಬಾಚಿದೆ. ಅಲ್ಲದೇ ಈ ಬಾರಿಯ ಆಸ್ಕರ್ ಪ್ರಶಸ್ತಿಗೂ ಆರ್.ಆರ್.ಆರ್ ಸಿನಿಮಾ ಸ್ಪರ್ಧೆಯಲ್ಲಿದೆ. ಇನ್ನೂ ಅನೇಕ ಪ್ರಶಸ್ತಿಗಳಲ್ಲಿ ಚಿತ್ರ ಸ್ಪರ್ಧೆ ಮಾಡುತ್ತಿದೆ. ಅದರಲ್ಲೂ ಆಸ್ಕರ್ ಮೇಲೆ ಕಣ್ಣಿಟ್ಟು ಚಿತ್ರತಂಡ ಕೂತಿರುವುದರಿಂದ ಆ ಪ್ರಶಸ್ತಿ ಸಿಗುತ್ತಾ ಎನ್ನುವ ಕುತೂಹಲ ಕೂಡ ಮೂಡಿದೆ.

ಆರ್.ಆರ್.ಆರ್ ಸಿನಿಮಾ ಭಾರತೀಯ ಚಿತ್ರರಂಗವನ್ನೇ ಬೆರಗಿನಿಂದ ನೋಡುವಂತೆ ಮಾಡಿತ್ತು. ಸಾವಿರಾರು ಕೋಟಿ ರೂಪಾಯಿಗಳನ್ನು ಬಾಚಿತ್ತು. 2022ರಲ್ಲಿ ತೆರೆಗೆ ಕಂಡ ಸಿನಿಮಾಗಳ ಪೈಕಿ ಬ್ಲಾಕ್ ಬಸ್ಟರ್ ಹಿಟ್ ಚಿತ್ರ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ಈ ಹೊತ್ತಿನಲ್ಲಿ ಪ್ರಶಸ್ತಿಗಳು ಬರುತ್ತಿರುವುದು ಸಹಜವಾಗಿಯೇ ಚಿತ್ರತಂಡಕ್ಕೆ ಮತ್ತು ಅಭಿಮಾನಿಗಳಿಗೆ ಸಂಭ್ರಮ ಹೆಚ್ಚಿಸಿದೆ.

 

andolanait

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

3 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

3 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

4 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

5 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

5 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

5 hours ago