ನವದೆಹಲಿ: ರಾಜ ಮೌಳಿ ನಿರ್ದೇಶನದ, ಈ ವರ್ಷ ತೆರೆಕಂಡು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿರುವ ‘ಆರ್.ಆರ್.ಆರ್’ ಸಿನಿಮಾಗೆ ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್’ನಲ್ಲಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಮೊನ್ನೆಯಷ್ಟೇ ಈ ಸಿನಿಮಾ ನಾಮನಿರ್ದೇಶನಕ್ಕೆ ಆಯ್ಕೆಯಾಗಿದ್ದನ್ನು ಚಿತ್ರತಂಡ ಹಂಚಿಕೊಂಡಿತ್ತು. ಇದೀಗ ಮೂರು ಪ್ರಶಸ್ತಿಗಳನ್ನು ಅದು ಪಡೆದುಕೊಂಡಿದೆ. ಈ ವಿಷಯವನ್ನು ಸ್ವತಃ ಚಿತ್ರತಂಡವೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ.
ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್ ಸಂಸ್ಥೆಯು ಆರ್.ಆರ್.ಆರ್ ಸಿನಿಮಾಗೆ ಅತ್ಯುತ್ತಮ ವಿದೇಶಿ ಸಿನಿಮಾ, ಅತ್ಯುತ್ತಮ ಸಂಗೀತ ಸಂಯೋಜನೆ ಮತ್ತು ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಗಳನ್ನು ನೀಡಿರುವ ಸಂಸ್ಥೆಗೆ ರಾಜಮೌಳಿ ಅಂಡ್ ಟೀಮ್ ಧನ್ಯವಾದಗಳನ್ನು ಅರ್ಪಿಸಿದೆ.
ಆರ್.ಆರ್.ಆರ್ ಸಿನಿಮಾ ಐದು ವಿಭಾಗಗಳಲ್ಲಿ ನಾಮಿನೇಷನ್ ಪಟ್ಟಿಯಲ್ಲಿತ್ತು. ಅದರಲ್ಲಿ ಮೂರು ಪ್ರಶಸ್ತಿಗಳನ್ನು ಅದು ಬಾಚಿದೆ. ಅಲ್ಲದೇ ಈ ಬಾರಿಯ ಆಸ್ಕರ್ ಪ್ರಶಸ್ತಿಗೂ ಆರ್.ಆರ್.ಆರ್ ಸಿನಿಮಾ ಸ್ಪರ್ಧೆಯಲ್ಲಿದೆ. ಇನ್ನೂ ಅನೇಕ ಪ್ರಶಸ್ತಿಗಳಲ್ಲಿ ಚಿತ್ರ ಸ್ಪರ್ಧೆ ಮಾಡುತ್ತಿದೆ. ಅದರಲ್ಲೂ ಆಸ್ಕರ್ ಮೇಲೆ ಕಣ್ಣಿಟ್ಟು ಚಿತ್ರತಂಡ ಕೂತಿರುವುದರಿಂದ ಆ ಪ್ರಶಸ್ತಿ ಸಿಗುತ್ತಾ ಎನ್ನುವ ಕುತೂಹಲ ಕೂಡ ಮೂಡಿದೆ.
ಆರ್.ಆರ್.ಆರ್ ಸಿನಿಮಾ ಭಾರತೀಯ ಚಿತ್ರರಂಗವನ್ನೇ ಬೆರಗಿನಿಂದ ನೋಡುವಂತೆ ಮಾಡಿತ್ತು. ಸಾವಿರಾರು ಕೋಟಿ ರೂಪಾಯಿಗಳನ್ನು ಬಾಚಿತ್ತು. 2022ರಲ್ಲಿ ತೆರೆಗೆ ಕಂಡ ಸಿನಿಮಾಗಳ ಪೈಕಿ ಬ್ಲಾಕ್ ಬಸ್ಟರ್ ಹಿಟ್ ಚಿತ್ರ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ಈ ಹೊತ್ತಿನಲ್ಲಿ ಪ್ರಶಸ್ತಿಗಳು ಬರುತ್ತಿರುವುದು ಸಹಜವಾಗಿಯೇ ಚಿತ್ರತಂಡಕ್ಕೆ ಮತ್ತು ಅಭಿಮಾನಿಗಳಿಗೆ ಸಂಭ್ರಮ ಹೆಚ್ಚಿಸಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…