ಚಿತ್ರ ಮಂಜರಿ

ನಟ ದರ್ಶನ್‌ ಮೇಲೆ ಚಪ್ಪಲಿ ಎಸೆತ!

ಹೊಸಪೇಟೆ : ನಟ ಚಾಲೇಂಜಿಂಗ್‌ ದರ್ಶನ್‌ ಅಭಿನಯದ ಕ್ರಾಂತಿ ಸಿನೆಮಾದ ಪ್ರಚಾರದ ವೇಳೆ ಕಿಡಿಗೇಡಿಗಳು ನಟ ದರ್ಶನ ಮೇಲೆ ಚಪ್ಪಲಿ ಎಸೆದ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಿನ್ನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ನಟ ದರ್ಶನ್‌ ತೂಗದೀಪ ಅಭಿಯನದ ಬಹುನಿರೀಕ್ಷಿತ ಕ್ರಾಂತಿ ಚಿತ್ರದ “ಬೊಂಬೆ, ಬೊಂಬೆ’ ಆಡಿಯೋ ಬಿಡುಗಡೆ ಸಮಾರಂಭ ನಗರದ ವಾಲ್ಮೀಕಿ ವೃತ್ತದಲ್ಲಿ ಭಾನುವಾರ ರಾತ್ರಿ ನಡೆಯಿತು. ಈ ವೇಳೆ ದರ್ಶನ ನೋಡಲು ಸಾವಿರಾರು ಜನರು ಆಗಮಿಸಿದ್ದರು, ಆದರೆ ಈ ವೇಳೆ ಕಿಡಿಗೇಡಿಗಳು ದರ್ಶನ ಮೇಲೆ ಚಪ್ಪಲಿ ಎಸೆದಿದ್ದಾರೆ. ಲಘು ಲಾಠಿ ಪ್ರಹಾರ: ನಟ ದರ್ಶನ್‌ ಅಭಿಯನದ ಕ್ರಾಂತಿ ಚಿತ್ರದ ಆಡಿಯೋ ಲಾಂಚ್‌ ಕಾರ್ಯಕ್ರಮದಲ್ಲಿ ಕಲ್ಲು ತೂರಾಟ ನಡೆದಿದ್ದು, ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಘಟನೆ ಹಿನ್ನೆಲೆಯಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಕೆಲ ಯುವಕರು ದರ್ಶನ್‌ ಬ್ಯಾನರ್‌ ಹರಿದು ಹಾಕಿದ್ದರು. ಈ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಹಾಡು ಬಿಡುಗಡೆಗೊಳಿಸಿ ಚಿತ್ರ ತಂಡ ಮರಳಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಹಾಸಪಟ್ಟಿದ್ದಾರೆ.

andolanait

Recent Posts

ಪ್ರವಾಸಿ ಮಹಿಳೆ ನಾಪತ್ತೆ

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…

35 mins ago

ಓದುಗರ ಪತ್ರ: ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ

ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…

40 mins ago

ಓದುಗರ ಪತ್ರ: ಮರುಪರಿಶೀಲನೆ ಅತ್ಯಗತ್ಯ

ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…

42 mins ago

ಬಸ್‌ನಲ್ಲಿ ಚಿನ್ನಾಭರಣ ಕಳವು

೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮…

50 mins ago

ಮೈಸೂರು ಡಿಸಿ ಬಂಧನಕ್ಕೆ ವಾರಂಟ್

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

55 mins ago