ಚಿತ್ರ ಮಂಜರಿ

ಕಾವೇರಿಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲುವ ಸಮಯ ಬಂದಿದೆ: ಅನಂತ್ ನಾಗ್

ಬೆಂಗಳೂರು: ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ. ಕರ್ನಾಟಕ ಇದೀಗ ಕಠಿಣ ನಿಲುವು ತೆಗದುಕೊಳ್ಳಬೇಕಾಗಿದೆ ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದಾರೆ.

ಕಾವೇರಿ ಬಿಕ್ಕಟ್ಟಿನ ಸಂಬಂಧ ವಿಡಿಯೊಂದರಲ್ಲಿ ಮಾತನಾಡಿರುವ ಅನಂತ್ ನಾಗ್, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯದ ಶಾಸಕರು, ಸಂಸದರು ಒಗ್ಗಟ್ಟಾಗಿ ನಿಂತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮಳೆ ಕಡಿಮೆ ಇದ್ದ ಸಂದರ್ಭದಲ್ಲಿ ಎಂದಿನಂತೆ ತಮಿಳುನಾಡು ಕಾವೇರಿ ವಿವಾದ ಆರಂಭಿಸಿದೆ. ಇದನ್ನು ಸುಮಾರು 60 ವರ್ಷದಿಂದ ನೋಡಿಕೊಂಡು ಬಂದಿದ್ದೇವೆ. ಅಲ್ಲಿ ಅಧಿಕಾರಕ್ಕೆ ಬರುವುದು ಕೇವಲ ಡಿಎಂಕೆ ಸರ್ಕಾರಗಳೇ. ಕರ್ನಾಟಕ ಸರಿಯಾಗಿ ಕಾವೇರಿ ನೀರು ಬಿಡುತ್ತಿಲ್ಲ ಎನ್ನುವ ಭಾವನೆಯನ್ನು ಅಲ್ಲಿನ ಜನರಿಗೆ ಅವರು ತಂದಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕ ಎಂದರೆ ಪಾಕಿಸ್ತಾನ, ಶ್ರೀಲಂಕಾ ಅಂದುಕೊಂಡಿದ್ದಾರೆ. ಯುದ್ಧಕ್ಕೆ ನಿಂತುಕೊಂಡಂತೆ ಅವರ ನಡೆಯಿದೆ. ಮಾತುಕತೆಯಲ್ಲಿ ಬಗೆಹರಿಸಲು ಅವರಿಗೆ ಇಷ್ಟವಿಲ್ಲ. ಅವರೆಲ್ಲರೂ ಒಗ್ಗಟ್ಟಾಗಿ ಕೇಂದ್ರ ಸರ್ಕಾರಕ್ಕೆ ಹೋಗಿ ಕಾವೇರಿ ಸಮಸ್ಯೆಯನ್ನು ಪ್ರತಿನಿಧಿಸುತ್ತಾರೆ. ನಮ್ಮವರು ಅಷ್ಟೇ ಬಲದಿಂದ ಹೋಗಿ ಪ್ರತಿನಿಧಿಸಿದ್ದು ಕೇಳಿಬರುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಕಾವೇರಿ ನೀರು ಅವರಿಗೆ ಕುಡಿಯಲು ಅಲ್ಲ ಬದಲಾಗಿ ಕೈಗಾರಿಕೆಗಳಿಗೆ ಹಾಗೂ ಕೃಷಿಗೆ ಬಳಕೆಗೆ, ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲುವ ಸಮಯ ಬಂದಿದೆ. ನಮ್ಮ ಎಲ್ಲ ಶಾಸಕರು, ಸಂಸದರು ಒಗ್ಗಟ್ಟಿನಿಂದ ನಿಂತುಕೊಂಡು ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು. ಈ ಕುರಿತು ದಿಟ್ಟ ನಿಲುವು ತಾಳಬೇಕು ಎಂದು ಅನಂತನಾಗ್‌ ಆಗ್ರಹಿಸಿದ್ದಾರೆ.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

1 hour ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

2 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

4 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

7 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

8 hours ago