ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 10ನೇ ಘ ಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಅನ್ನು ಪ್ರಧಾನ ಮಾಡಿ ಗೌರವಿಸಲಾಗಿದೆ. ಈ ಮೂಲಕ ನಟ ರಮೇಶ್ ಅರವಿಂದ್ ಅವರು ಡಾಕ್ಟರ್ ರಮೇಶ್ ಅರವಿಂದ್ ಎನಿಸಿಕೊಳ್ಳಲಿದ್ದಾರೆ.
ವಿಶ್ವವಿದ್ಯಾಲಯದ ಕುಲಪತಿ ರಾಮಚಂದ್ರಗೌಡ ಅವರು ಗೌರವ ಡಾಕ್ಟರೇಟ್ ಅನ್ನು ಪ್ರಧಾನ ಮಾಡಿದ್ದು. ರಮೇಶ್ ಅರವಿಂದ್ ಅವರ ಜೊತೆ ಸಮಾಜ ಸೇವಕ ರವಿಚಂದರ್, ದಾಸೋಹ ಅಕ್ಕ ಅನ್ನಪೂರ್ಣ ತಾಯಿ ಇವರುಗಳಿಗೂ ಡಾಕ್ಟರೇಟ್ ಅನ್ನು ಪ್ರಧಾನ ಮಾಡಲಾಗಿದೆ.
ಡಾಕ್ಟರೇಟ್ ಪಡೆದುಕೊಂಡಿರುವ ಬಗ್ಗೆ ನಟ ರಮೇಶ್ ಅರವಿಂದ್ ಅವರು ಟ್ವೀಟ್ ಮಾಡುವ ಮೂಲಕ ಸಿನಿಮ ಕ್ಷೇತ್ರಕ್ಕೆ ನನ್ನ ಕೊಡುಗೆಗಾಗಿ ನಾನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಿಗೆ ಮತ್ತು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಕೃತಜ್ಞನಾಗಿದ್ದೇನೆ. ಪ್ರತಿಯೊಬ್ಬ ಸಿನಿ ಪ್ರೇಕ್ಷಕರಿಗೆ ಮತ್ತು ಚಿತ್ರರಂಗಕ್ಕೆ ಸಂಬಂಧಿಸಿದ ಎಲ್ಲರಿಗೂ ನನ್ನ ಹೃದಯಪೂರ್ವಕ ಧನ್ಯವಾದಗಳು. ಎಂದು ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಕಾರ್ಯಕ್ರಮವು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ 418 ವಿಶ್ವವಿದ್ಯಾಲಯಗಳು ವಿದ್ಯಾಲಯದ ಅಧೀನದಲ್ಲಿ ಸಂಯೋಜನೆಗೊಂಡಿದೆ.
ಘಟಿಕೋತ್ಸವ ಕಾರ್ಯಕ್ರಮದಲ್ಲಿ 43, 607 ವಿದ್ಯಾರ್ಥಿಗಳು ಪದವಿಯನ್ನು ಪಡೆದುಕೊಂಡರು. ಇದರಲ್ಲಿ 11 ವಿದ್ಯಾರ್ಥಿಗಳು ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನೀಡಲಾಯಿತು.
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…