ಬೆಂಗಳೂರು : ಕನ್ನಡ ಕಿರುತೆರೆಯ ಖ್ಯಾತ ನಟ, ನಿರ್ದೇಶಕ ರವಿಕಿರಣ್ ಅವರ ಸಹೋದರ ಭಾಸ್ಕರ್ ರವಿವಾರ ತಡರಾತ್ರಿ ನಿಧನ ಹೊಂದಿದ್ದಾರೆ. ಬದುಕು, ಸುಕನ್ಯಾ ಸೇರಿದಂತೆ ಹಲವು ಧಾರಾವಾಹಿಗಳನ್ನು ಭಾಸ್ಕರ್ ನಿರ್ಮಿಸಿದ್ದರು. ರವಿಕಿರಣ್ ಬ್ಯಾನರ್ ನಲ್ಲಿ ಬರುತ್ತಿದ್ದ ಬಹುತೇಕ ಧಾರಾವಾಹಿಗಳಿಗೆ ಭಾಸ್ಕರ್ ನಿರ್ಮಾಪಕರಾಗಿರುತ್ತಿದ್ದರು. ಅಲ್ಲದೇ, ರವಿಕಿರಣ್ ಅವರಿಗೆ ಬೆನ್ನೆಲುಬಾಗಿ ನಿಂತವರು.
ಭಾಸ್ಕರ್ ಕೇವಲ ನಿರ್ಮಾಪಕರು ಮಾತ್ರವಲ್ಲ, ಉದ್ಯಮಿಯೂ ಕೂಡ. ಹಲವಾರು ಉದ್ಯಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜೊತೆಗೆ ಕರ್ನಾಟಕ ಟೆಲಿವಿಷನ್ ಕ್ಲಬ್ ನ ನಿರ್ದೇಶಕರಾಗಿಯೂ ಅವರು ಟಿವಿ ಉದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಇವರ ನಿರ್ಮಾಣದಲ್ಲಿ ಮೂಡಿ ಬಂದ ಬದುಕು ಸಾವಿರಕ್ಕೂ ಹೆಚ್ಚು ಕಂತುಗಳಲ್ಲಿ ಪ್ರಸಾರವಾಗಿದೆ. ಸುಕನ್ಯಾ ಕೂಡ ಜನಪ್ರಿಯ ಧಾರಾವಾಹಿಗಳಲ್ಲಿ ಒಂದು.
ಭಾಸ್ಕರ್ ಪುತ್ರ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದಾರೆ. ತೆಲುಗು ಮತ್ತು ಕನ್ನಡದ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಭಾಸ್ಕರ್ ನಿಧನಕ್ಕೆ ಕಿರುತೆರೆಯ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಟೆಲಿವಿಷನ್ ಉದ್ಯಮದ ನಾನಾ ಸಂಘಟನೆಗಳು ಸಂತಾಪ ವ್ಯಕ್ತಪಡಿಸಿವೆ.
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…
ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…
ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…
ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ ಸಾರ್... ಎಲ್ಲ…
ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…