ಚಿತ್ರ ಮಂಜರಿ

ಕಾಟೇರ ಚಿತ್ರ ಮೆಚ್ಚಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ!

ಹುಬ್ಬಳ್ಳಿ: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹು ನಿರೀಕ್ಷಿತ ಕಾಟೇರ ಚಿತ್ರ ಇದೇ ಡಿಸೆಂಬರ್‌ ೨೯ ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಚಿತ್ರ ಮೆಚ್ಚಿರುವ ಅಭಿಮಾನಿಗಳು ಬಹುಪರಾಕ್‌ ಎಂದಿದ್ದಾರೆ. ಈ ಬೆನ್ನಲ್ಲೆ ಇಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಹುಬ್ಬಳ್ಳಿಯಲ್ಲಿ ಕಾಟೇರ ಸಿನಿಮಾ ವೀಕ್ಷಿಸಿದ್ದು, ಚಿತ್ರದ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದರ್ಶನ ನಟನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿ ಹುಬ್ಬಳ್ಳಿಯಲ್ಲಿ ಚಿತ್ರ ವೀಕ್ಷಣೆ ಮಾಡಿದ್ದಾರೆ. ಇವರಿಗೆ ಶಾಸಕ ಮಹೇಶ್ ಟೆಂಗಿನಕಾ‌ಯಿ ಸಾಥ್‌ ನೀಡಿದ್ದಾರೆ. ಸಾಮಾಜಿಕ ಬದ್ಧತೆ, ನಟನೆ ಎಲ್ಲದರ ಬಗ್ಗೆಯೂ ಸಚಿವರು ಮೆಚ್ಚುಗೆಯ ಮಾತುಗಳನ್ನಾಡಿದ್ದು, ದರ್ಶನ್‌ ಅಭಿಮಾನಿಗಳಿಗೆ ಸಂತಸ ತಂದಿದೆ.

ನಟ ದರ್ಶನ್‌ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಕಾಟೇರ ಚಿತ್ರಕ್ಕೆ ತರುಣ್‌ ಸುಧೀರ್‌ ನಿರ್ದೇಶನ ಮಾಡಿದ್ದಾರೆ. ರಾಕ್‌ಲೈನ್‌ ಎಂಟರ್‌ಟೈನ್‌ಮೆಂಟ್‌ ಅಡಿಯಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ಸಮಾಜಿಕ ಕಳಕಳಿಯಿರುವ ಸಿನಿಮವಾಗಿದ್ದು, ಚಿತ್ರ ರಸಿಕರು, ರಾಜಕಾರಣಿಗಳು ಎಲ್ಲರೂ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಪ್ರಲ್ಹಾದ್‌ ಜೋಶಿ ಟ್ವೀಟ್‌ ನಲ್ಲೇನಿದೆ?

ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಕ್‌ಲೈನ್ ವೆಂಕಟೇಶ ಅವರ ನಿರ್ಮಾಣದಲ್ಲಿ ತರುಣ್ ಸುಧೀರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಕಾಟೇರ ಚಲನಚಿತ್ರವನ್ನು ಹುಬ್ಬಳ್ಳಿಯಲ್ಲಿ ವೀಕ್ಷಿಸಿದೆನು.

ರೈತರಿಗೆ ಪ್ರತಿಯೊಬ್ಬರೂ ನೀಡಬೇಕಾದ ಪ್ರಾಮುಖ್ಯತೆ, ಸಮಾಜದಲ್ಲಿ ಸರ್ವರನ್ನೂ ಸಮಾನವಾಗಿ ಕಾಣಬೇಕೆನ್ನುವ ಸಂದೇಶವನ್ನು ಚಲನಚಿತ್ರದ ಮೂಲಕ ಅಚ್ಚುಕಟ್ಟಾಗಿ ಅದ್ಭುತವಾಗಿ ತೋರಿಸಲಾಗಿದೆ.
ದರ್ಶನ್ ಅವರ ಅದ್ಭುತ ನಟನೆ ಅಭಿಮಾನಿಗಳನ್ನು ಚಲನಚಿತ್ರ ಪ್ರಿಯರನ್ನು ಮತ್ತೊಮ್ಮೆ ರಂಜಿಸುವುದರ ಜೊತೆಗೆ ಹೊಸ ಸಂದೇಶವನ್ನು ಸಾರಿದ್ದಾರೆ. ಚಲನಚಿತ್ರ ಯಶಸ್ಸು ಕಾಣಲಿ ಎಂದು ಕಾಟೇರ ಚಲನಚಿತ್ರ ತಂಡಕ್ಕೆ ಶುಭ ಹಾರೈಸುತ್ತೇನೆ ಎಂದು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಕಾಟೇರ ಚಿತ್ರವನ್ನು ಹಾರೈಸಿರುವ ಬಗ್ಗೆ ಬರೆದುಕೊಂಡಿದ್ದಾರೆ.

https://x.com/JoshiPralhad/status/1741350641728168256?s=20

andolanait

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

8 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

8 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

9 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

9 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

9 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

9 hours ago