ಚಿತ್ರ ಮಂಜರಿ

ಉಸಿರಾಟ ಸಮಸ್ಯೆಯಿಂದ ರಿಯಲ್​​ ಸ್ಟಾರ್​​​​​​​ ಉಪೇಂದ್ರ ಆಸ್ಪತ್ರೆಗೆ ದಾಖಲು

ನಟ​​ ​​​​​​​ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ಧಾರೆ. ಉಪೇಂದ್ರ ಎಮರ್ಜೆನ್ಸಿ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ಧಾರೆ. ನೆಲಮಂಗಲದ ಹರ್ಷ ಆಸ್ಪತ್ರೆಗೆ ಉಪೇಂದ್ರ ಅಡ್ಮಿಟ್​ ಆಗಿದ್ಧಾರೆ.

ಶಿವಮೊಗ್ಗದಿಂದ ಬರುವಾಗ ದಿಢೀರ್​​ ಆರೋಗ್ಯ ಕೈಕೊಟ್ಟಿದ್ದು, ಉಸಿರಾಟ ಸಮಸ್ಯೆ ಶುರುವಾದ ಕೂಡಲೇ ಆಸ್ಪತ್ರೆಗೆ ದಾಖಲಾಗಿದ್ಧಾರೆ. ಉಪೇಂದ್ರ ನೆಲಮಂಗಲದ ಹರ್ಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ಧಾರೆ. ಸಿನಿಮಾ ಶೂಟಿಂಗ್​ ವೇಳೆ ಡಸ್ಟ್​ ಅಲರ್ಜಿ ಆಗಿತ್ತು. ವಾಪಸ್​ ಬರುವಾಗ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ನಟ ಉಪೇಂದ್ರಗೆ ಉಸಿರಾಟ ಸಮಸ್ಯೆಯಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದು ಬೆಂಗಳೂರಿಗೆ ಪ್ರಯಾಣ ಬೆಳಸಿದ್ಧಾರೆ. ವೈದ್ಯರ ಏನೂ ಸಮಸ್ಯೆ ಇಲ್ಲ ಎಂದು ಹೇಳಿದ್ಧಾರೆ. ಡಿಸ್ಚಾರ್ಜ್​​​ ಆಗಿ ಬೆಂಗಳೂರಿನತ್ತ ಹೊರಟಿದ್ಧಾರೆ. ಸಾಂಬ್ರಾಣಿ ಹೊಗೆಯಿಂದ  ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಸಿನಿಮಾ ಶೂಟಿಂಗ್​​ ವೇಳೆ ಸಾಂಬ್ರಾಣಿ ಹೊಗೆ ಹಾಕಲಾಗಿತ್ತು.

 

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago