ಉಪೇಂದ್ರ ಅಭಿನಯದ ‘ಯುಐ’ ಚಿತ್ರವು ಡಿಸೆಂಬರ್.೨೦ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಉಪೇಂದ್ರ ಅಭಿನಯದ ಹಳೆಯ ಚಿತ್ರವೊಂದು, ಜನವರಿಯಲ್ಲಿ ಬಿಡುಗಡೆ ಆಗುತ್ತಿರುವ ಸುದ್ದಿಯೊಂದು ಕೇಳಿಬಂದಿದೆ.
೨೦೦೭ರಲ್ಲಿ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಉಪೇಂದ್ರ ಮತ್ತು ರಮ್ಯಾ ಅಭಿನಯದಲ್ಲಿ ‘ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್’ ಎಂಬ ಚಿತ್ರ ಪ್ರಾರಂಭವಾಗಿತ್ತು. ವಿಷ್ಣುವರ್ಧನ್ ಮತ್ತು ಅಂಬರೀಶ್ ಅವರ ಸಮ್ಮುಖದಲ್ಲಿ ಈ ಚಿತ್ರವು ಅಶೋಕ ಹೋಟೆಲ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಸೆಟ್ಟೇರಿತ್ತು. ಈ ಚಿತ್ರದ ಚಿತ್ರೀಕರಣ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದರೂ, ಕಾರಣಾಂತರಗಳಿಂದ ಬಿಡುಗಡೆಯಾಗಿರಲಿಲ್ಲ.
ಆ ಕಾಲಕ್ಕೆ ಅತ್ಯಂತ ದುಬಾರಿ ಬಜೆಟ್‌ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ‘ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್’, ೧೭ ವರ್ಷಗಳನಂತರ ‘ರಕ್ತ ಕಾಶ್ಮೀರ’ ಎಂಬ ಹೆಸರಿನಲ್ಲಿ ಬಿಡುಗಡೆಯಾಗುತ್ತಿದೆ.
ಆಗ ಅದನ್ನು ಮಕ್ಕಳ ಚಿತ್ರ ಎಂದು ಹೇಳಲಾಗಿತ್ತು. ಈಗ ಅದಕ್ಕೆ ಬೇರೆಯೇ ರೀತಿಯ ಪ್ರಚಾರ ನಡೆದಿದೆ. ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಇದೇ ಚಿತ್ರದ ಪ್ರಮುಖ ಕಥಾ ಹಂದರವಾಗಿದೆ. ಗಡಿ ಪ್ರದೇಶ ಅಷ್ಟೇ ಅಲ್ಲ. ಬೆಂಗಳೂರಿನಲ್ಲೂ ಉಗ್ರಗಾಮಿಗಳ ಕಾಟವಿದೆ.
ಅದರ ನಿರ್ಮೂಲನೆಗೆ ಸಂಬಂಧಿಸಿದ ಕಥಾವಸ್ತುವನ್ನೂ ಈ ಚಿತ್ರ ಹೊಂದಿದೆ. ಭಯೋತ್ಪಾದನೆ ವಿರುದ್ಧ ಮಕ್ಕಳು ಹೇಗೆ ಹೋರಾಡುತ್ತಾರೆ ಎಂಬ ಕಥೆ ಈ ಚಿತ್ರದಲ್ಲಿದೆ.
ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರೆ ‘ರಕ್ತ ಕಾಶ್ಮೀರ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಎಂ.ಎಸ್. ರಮೇಶ್ ಸಂಭಾಷಣೆ ಬರೆದರೆ, ಗುರುಕಿರಣ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಚಿತ್ರದಲ್ಲಿ ಉಪೇಂದ್ರ, ರಮ್ಯ, ಪಾರ್ವತಿ ಮಿಲ್ಟನ್, ದೊಡ್ಡಣ್ಣ, ಓಂಪ್ರಕಾಶ್ ರಾವ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…