ಚಿತ್ರ ಮಂಜರಿ

ಪಠಾಣ್​ ಪೋಸ್ಟರ್​ನಲ್ಲಿ ಯೋಗಿ ಆದಿತ್ಯನಾಥ್​ ಫೋಟೋ ಬಳಕೆ : ಪ್ರಕರಣ ದಾಖಲು

ಲಖನೌ(ಉತ್ತರ ಪ್ರದೇಶ): ‘ಪಠಾಣ್’ ಸಿನಿಮಾ ವಿವಾದ ದಿನೇ ದಿನೇ ಕಾವೇರುತ್ತಿದ್ದು, ಇದೀಗ ಶಾರುಖ್​ ಖಾನ್ ಅವರು​ ದೀಪಿಕಾ ಪಡುಕೋಣೆ ಅವರನ್ನು ತಬ್ಬಿಕೊಂಡಿರುವ ಪೋಸ್ಟರ್​ ಒಂದರಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾರ್ಫ್ ಮಾಡಿದ ಚಿತ್ರ ಹಂಚಿಕೊಂಡಿದ್ದಕ್ಕಾಗಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಯುಪಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಶಾರುಖ್ ಖಾನ್ ಅಭಿನಯದ ‘ಪಠಾಣ್’ ಚಿತ್ರದ ಪೋಸ್ಟರ್‌ಗಳಲ್ಲಿ ಸಿಎಂ ಯೋಗಿ ಅವರ ಫೋಟೋ ಹಾಕಿದ್ದಕ್ಕಾಗಿ ಹೆಡ್ ಕಾನ್‌ಸ್ಟೇಬಲ್ ನೀಡಿದ ದೂರು ಆಧರಿಸಿ ಲಖನೌನ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಡಿಜಿಪಿ ಕೇಂದ್ರ ಕಚೇರಿಯ ಸೈಬರ್ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದೆ.ಇತ್ತೀಚೆಗಷ್ಟೇ ಶಾರುಖ್​ ಖಾನ್​ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಪಠಾಣ್​ ಚಿತ್ರದ ‘ಬೇಷರಂ ರಂಗ್’ ಹಾಡು ಬಿಡುಗಡೆಯಾಗಿದ್ದು, ಹಾಡು ಬಿಡುಗಡೆಯ ಬೆನ್ನಲ್ಲೇ ವಿವಾದಕ್ಕೆ ಸಿಲುಕಿಕೊಂಡಿದೆ.

andolanait

Recent Posts

ಡೀಮ್ಡ್‌ ಅರಣ್ಯ ಪ್ರದೇಶ ಗುರುತಿಸುವಿಕೆಗೆ ಸಮಿತಿ ರಚನೆ : ಈಶ್ವರ ಖಂಡ್ರೆ

ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…

2 mins ago

ಕೆಪಿಟಿಸಿಎಲ್ : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…

5 mins ago

ಕ್ರೀಡಾ ನೇಮಕಾತಿ ಮೀಸಲಾತಿ ಅನುಷ್ಠಾನ : ಸಿಎಂ ಘೋಷಣೆ

ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…

11 mins ago

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

16 mins ago

ಹೊಸದಿಲ್ಲಿ : ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ ೧೧ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…

20 mins ago

ಮೈಸೂರು | 21 ರಂದು ಪಲ್ಸ್ ಪೋಲಿಯೋ ಅಭಿಯಾನ

ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…

1 hour ago