ಲಖನೌ(ಉತ್ತರ ಪ್ರದೇಶ): ‘ಪಠಾಣ್’ ಸಿನಿಮಾ ವಿವಾದ ದಿನೇ ದಿನೇ ಕಾವೇರುತ್ತಿದ್ದು, ಇದೀಗ ಶಾರುಖ್ ಖಾನ್ ಅವರು ದೀಪಿಕಾ ಪಡುಕೋಣೆ ಅವರನ್ನು ತಬ್ಬಿಕೊಂಡಿರುವ ಪೋಸ್ಟರ್ ಒಂದರಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾರ್ಫ್ ಮಾಡಿದ ಚಿತ್ರ ಹಂಚಿಕೊಂಡಿದ್ದಕ್ಕಾಗಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಯುಪಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಶಾರುಖ್ ಖಾನ್ ಅಭಿನಯದ ‘ಪಠಾಣ್’ ಚಿತ್ರದ ಪೋಸ್ಟರ್‌ಗಳಲ್ಲಿ ಸಿಎಂ ಯೋಗಿ ಅವರ ಫೋಟೋ ಹಾಕಿದ್ದಕ್ಕಾಗಿ ಹೆಡ್ ಕಾನ್‌ಸ್ಟೇಬಲ್ ನೀಡಿದ ದೂರು ಆಧರಿಸಿ ಲಖನೌನ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಡಿಜಿಪಿ ಕೇಂದ್ರ ಕಚೇರಿಯ ಸೈಬರ್ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದೆ.ಇತ್ತೀಚೆಗಷ್ಟೇ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ‘ಬೇಷರಂ ರಂಗ್’ ಹಾಡು ಬಿಡುಗಡೆಯಾಗಿದ್ದು, ಹಾಡು ಬಿಡುಗಡೆಯ ಬೆನ್ನಲ್ಲೇ ವಿವಾದಕ್ಕೆ ಸಿಲುಕಿಕೊಂಡಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…