ಬೆಂಗಳೂರು: ತನ್ನ ನಿಶ್ಚಿತಾರ್ಥದ ಬಗ್ಗೆ ಇಬ್ಬರು ಹುಡುಗಿಯರು ಮಾತನಾಡಿರುವ ಆಡಿಯೋ ವೈರಲ್ ಆದ ಬೆನ್ನಲ್ಲೇ ವೈಷ್ಣವಿ ಗೌಡ ನಿಶ್ಚಿತಾರ್ಥ ಮುರಿದುಕೊಂಡಿರುವುದಾಗಿ ಇನ್ಸ್ಟಾಗ್ರಾಂ ಸ್ಟೋರಿ ಮೂಲಕ ಖಚಿತಪಡಿಸಿದ್ದಾರೆ. ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವ ವಿರಾಜ್ ಸಿನಿಮಾದ ನಟ ವಿದ್ಯಾಭರಣ್ ಸರಿಯಿಲ್ಲ ಎಂದು ಇಬ್ಬರು ಹುಡುಗಿಯರು ಮಾತನಾಡಿರುವ ಆಡಿಯೋ ವೈರಲ್ ಆದ ಬೆನ್ನಲ್ಲೇ ಮಾಧ್ಯಮಗಳಲ್ಲಿ ಆರೋಪ- ಪ್ರತ್ಯಾರೋಪ ಚರ್ಚೆಯಾಗುತ್ತಿದ್ದು, ಇದರಿಂದ ಮನನೊಂದಿರುವ ವೈಷ್ಣವಿ ಗೌಡ ಇನ್ಸ್ಟಾಗ್ರಾಂ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
“” ನಾವು ಇದನ್ನು ಇಲ್ಲಿಗೆ ಕೈಬಿಡುತ್ತಿದ್ದೇವೆ. ಈ ವಿಷಯವನ್ನು ಮತ್ತೆ ಎಳೆಯಬೇಡಿ, ಇಲ್ಲಿಗೆ ಬಿಡಿ ಎಂದು ಎಲ್ಲರ ಬಳಿ ಮನವಿ ಮಾಡುತ್ತಿದ್ದೇನೆ. ಎಲ್ಲರ ಶುಭಹಾರೈಕೆಗೆ ಧನ್ಯವಾದಗಳುʼʼ ಎಂದು ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಹಾಕಿದ್ದಾರೆ. “” ನಾನು, ವಿದ್ಯಾಭರಣ್ ನಿಶ್ಚಿತಾರ್ಥ ಮಾಡಿಕೊಂಡಿಲ್ಲ. ಎರಡು ಕುಟುಂಬದವರು ಮಾತನಾಡಿಕೊಂಡಿದ್ದೆವು ಅಷ್ಟೇ. ಮದುವೆ ಬಗ್ಗೆ ನಾವಿನ್ನೂ ಯಾವ ನಿರ್ಧಾರವನ್ನು ತೆಗೆದುಕೊಂಡಿರಲಿಲ್ಲ. ಈಗಲೇ ಎಲ್ಲ ವಿಷಯ ತಿಳಿದಿದ್ದು ಗೊತ್ತಾಗಿದೆ. ಹಾಗಾಗಿ ನಾನು ಈ ಬಗ್ಗೆ ಮುಂದೆ ಹೆಜ್ಜೆ ಇಡೋದಿಲ್ಲʼʼ ಎಂದು ವೈಷ್ಣವಿ ಗೌಡ ಅವರು ತಿಳಿಸಿದ್ದಾರೆ.
ವಿದ್ಯಾಭರಣ್ ಸ್ಪಷ್ಟನೆ
“” ವೈಷ್ಣವಿ ಜೊತೆಗೆ ನನ್ನ ನಿಶ್ಚಿತಾರ್ಥ ನಡೆದಿಲ್ಲ. ಎರಡು ಕುಟುಂಬದ ನಡುವೆ ಪ್ರಾಥಮಿಕ ಮಾತುಕತೆಯಾಗಿತ್ತು. ಆದರೆ ಈ ಫೋಟೋ ಎಲ್ಲಿಂದ ವೈರಲ್ ಆಯಿತು ಎನ್ನುವುದು ಗೊತ್ತಿಲ್ಲ. ನಮ್ಮ ಕುಟುಂಬದವರ ವರ್ಚಸ್ಸನ್ನು ಹಾಳು ಮಾಡಲು ಪ್ಲಾನ್ ಮಾಡಿದ್ದಾರೆ. ನಾನು ಯಾವುದೇ ಹುಡುಗಿಯರೊಂದಿಗೆ ತಪ್ಪಾಗಿ ನಡೆದುಕೊಂಡಿಲ್ಲ. ಆಕೆ ನೇರವಾಗಿ ಬಂದು ಆರೋಪವನ್ನು ಮಾಡಬಹುದಿತ್ತು. ನನ್ನ ಮೊದಲ ಫಿಲ್ಮ್ ಬಂದಾಗಲೇ ಇವರು ಆರೋಪ ಮಾಡಬಹುದಿತ್ತು. ಹೆಸರು ಹೇಳಲು ಧೈರ್ಯವಿಲ್ಲದಿರುವ ಆಕೆ ಆರೋಪ ಮಾಡುತ್ತಿದ್ದಾಳೆʼʼ ಎಂದು ಕಿಡಿಕಾರಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…