ಬೆಂಗಳೂರು: ಕನ್ನಡ ಕಿರುತೆರೆ ಲೋಕದ ಖ್ಯಾತ ನಟಿ, ಅಗ್ನಿಸಾಕ್ಷಿ ಸನ್ನಿಧಿ ಎಂದೇ ಖ್ಯಾತಿ ಗಳಿಸಿರುವ ವೈಷ್ಣವಿ ಗೌಡ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮನೆ ಮಾತಾಗಿದ್ದರು ವೈಷ್ಣವಿ ಗೌಡ. ಈ ಧಾರಾವಾಹಿ ದೊಡ್ಡ ಮಟ್ಟದ ಕ್ಯಾತಿ ತಂದುಕೊಟ್ಟಿತ್ತು. ಧಾರಾವಾಹಿ ಬಳಿಕ ವೈಷ್ಣವಿ ಗೌಡ ಬಿಗ್ ಬಾಸ್ ಕನ್ನಡ ಸೀಸನ್ 8 ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು. ಬಿಗ್ ಮನೆಯಲ್ಲಿ ಅದ್ಭುತ ಆಟವಾಡುವ ಮೂಲಕ ಎಲ್ಲರಿಗೂ ಇಷ್ಟವಾಗಿದ್ದರು. ಧಾರಾವಾಹಿ, ರಿಯಾಲಿಟಿ ಶೋ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಮಿಂಚಿದ್ದಾರೆ. ಇದೀಗ ಮದುವೆಯಾಗಲು ನಿರ್ಧರಿಸಿದ್ದಾರೆ. ವೈಷ್ಣವಿ ಗೌಡ ಅವರ ನಿಶ್ಚಿತಾರ್ಥದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೈಷ್ಣವಿ ಹಸೆಮಣೆ ಏರುತ್ತಿರುವ ಹುಡುಗ ವಿದ್ಯಾ ಭರಣ್. ಈಗಾಗಲೇ ಒಂದು ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. 2018ರಲ್ಲಿ ರಿಲೀಸ್ ಆಗಿದ್ದ ವಿರಾಜ್ ಎನ್ನುವ ಸಿನಿಮಾದಲ್ಲಿ ವಿದ್ಯಾ ಭರಣ್ ನಟಿಸಿದ್ದರು. ಬೆಂಗಳೂರು ಮೂಲದ ಹುಡುಗ ವಿದ್ಯಾ ಭರಣ್ ಬಿಎಮ್‌ಎಸ್ ಇಂಜಿನಿಯರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದಾರೆ. ಇದೀಗ ವೈಷ್ಣವಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…
ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…
ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ…
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…