ಬೆಂಗಳೂರು: ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಇಂದು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಕೇರಳ ಹೈಕೋರ್ಟ್ ಮೊನ್ನೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದ್ದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎನ್ನುವ ಷರತ್ತೂ ಸೇರಿದಂತೆ ಹಲವು ಷರತ್ತುಗಳು ಹಾಕಿತ್ತು.
ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ 50 ಸಾವಿರ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು ಎಂದು ಕೋರ್ಟ್ ತಿಳಿಸಿತ್ತು. ಇದೀಗ ಸುಪ್ರೀಂ ಕೋರ್ಟ್, ನಟ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರ್ಗಂದೂರ್ ಗೆ ಮಧ್ಯಂತರ ರಕ್ಷಣೆ ನೀಡಿದೆ. ತನಿಖೆ ವೇಳೆ ಬಂಧಿಸದಂತೆ ಸುಪ್ರೀಂ ಸೂಚಿಸಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…