ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 10ರ ಸ್ಪರ್ಧಿ ವರ್ತೂರ್ ಸಂತೋಷ್‌ಗೆ ಹೆಚ್ಚಿನ ಜನಪ್ರಿಯತೆ ಸಿಕ್ಕಿದೆ. ಬಿಗ್ ಬಾಸ್ ವಿನ್ನರ್‌ಗಿಂತಲೂ ಹೆಚ್ಚಿನ ಪ್ರೀತಿಗೆ ವರ್ತೂರ್ ಪಾತ್ರರಾಗಿದ್ದಾರೆ. ರಾಜ್ಯಾದ್ಯಂತ ವಿವಿಧ ಸಂಘ-ಸಂಸ್ಥೆಗಳು ವರ್ತೂರ್‌ಗೆ ಸನ್ಮಾನ ಮಾಡುತ್ತಾ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಇದೇ ರೀತಿ ವರ್ತೂರ್ ಅವರಿಗೆ ಪೊಲೀಸ್ ಅಧಿಕಾರಿಯೊಬ್ಬರು ಸನ್ಮಾನ ಮಾಡಿದ್ದು ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಪಿಎಸ್ಐ ತಿಮ್ಮರಾಯಪ್ಪ ಎಂಬುವರು ಪೊಲೀಸ್ ಸಮವಸ್ತ್ರದಲ್ಲಿಯೇ ವರ್ತೂರು ಸಂತೋಷ್ ಅವರಿಗೆ ಸನ್ಮಾನ ಮಾಡಿದ್ದರು. ತಿಮ್ಮರಾಯಪ್ಪ, ವರ್ತೂರು ಸಂತೋಷ್‌ಗೆ ಪೇಟ, ಶಾಲು ತೊಡಿಸಿ ಸನ್ಮಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು. ಇದನ್ನು ಗಮನಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ತಿಮ್ಮರಾಯಪ್ಪ ಅವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ವರ್ತೂರು ಸಂತೋಷ್ ಬಿಗ್‌ಬಾಸ್ ಮನೆಗೆ ಹೋದಾಗ, ಹುಲಿ ಉಗುರು ಧರಿಸಿದ್ದಾರೆಂಬ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿ ಅವರನ್ನು ಬಿಗ್‌ಬಾಸ್ ಮನೆಯಿಂದಲೇ ಬಂಧಿಸಿ ಕರೆದೊಯ್ಯಲಾಗಿತ್ತು. ಕೆಲ ದಿನಗಳ ಕಾಲ ಜೈಲಿನಲ್ಲಿದ್ದ ವರ್ತೂರು ಸಂತೋಷ್ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಆಗಿ ಹೊರಬಂದರು. ಅದಾದ ಬಳಿಕ ಮತ್ತೆ ಬಿಗ್‌ಬಾಸ್ ಮನೆಗೆ ಬಂದು ಅದ್ಭುತವಾಗಿ ಆಟವಾಡಿ ಫೈನಲಿಸ್ಟ್ ಆದರು. ಫೈನಲಿಸ್ಟ್ ಆಗಿ ಹೊರಬಂದ ಬಳಿಕ ವರ್ತೂರು ಅವರು ದೊಡ್ಡ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ.
ಇದರ ಬೆನ್ನಲ್ಲೇ ಪೊಲೀಸ್ ಅಧಿಕಾರಿಯೊಬ್ಬರು ಅವರಿಗೆ ಸನ್ಮಾನ ಮಾಡಿ ವರ್ಗಾವಣೆಯಾಗಿರುವುದು ಅಭಿಮಾನಿಗಳಲ್ಲಿ ಬೇಸರ ತಂದಿದೆ.
ಮೂವರು ಕನ್ನಡಿಗರಿವರು ; ಮಂಡ್ಯದ ಅಂಕೇಗೌಡ, ದಾವಣಗೆರೆಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಎಸ್.ಜಿ. ಸುಶೀಲಮ್ಮ ಬೆಂಗಳೂರು : ದೇಶದ…
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…
ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…