ಸ್ಯಾಂಡಲ್ವುಡ್ ಗಾಯಕ, ನಟ, ಬಿಗ್ ಬಾಸ್ ಖ್ಯಾತಿಯ ವಾಸುಕಿ ವೈಭವ್ ತಮ್ಮ ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ಬೃಂದಾ ವಿಕ್ರಮ್ ಜೊತೆಗೆ ಹಸೆಮಣೆ ಏರಿದ್ದಾರೆ.
ವಾಸುಕಿ ವೈಭವ್ ಹಾಗೂ ಬೃಂದಾ ವಿಕ್ರಮ್ ಇಬ್ಬರೂ ಕೂಡ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ವಾಸುಕಿ ವೈಭವ್ ಅವರು ಈವರೆಗೂ ಮದುವೆಯ ವಿಚಾರವನ್ನು ಗುಟ್ಟಾಗಿಯೇ ಇಟ್ಟಿದ್ದರು. ಆದರೆ ಯುಟ್ಯೂಬ್ ಚಾನೆಲ್‌ವೊಂದಕ್ಕೆ ಟಗರು ಪಲ್ಯ ಸಿನಿಮಾದ ಕುರಿತು ಸಂದರ್ಶನ ನೀಡುವ ವೇಳೆಯಲ್ಲಿ, ನಟಿ ಶೃತಿ ಅವರು ಬಾಯಿತಪ್ಪಿ ವಾಸುಕಿ ಮದುವೆ ವಿಚಾರದ ಬಗ್ಗೆ ಮಾತನಾಡಿದ್ದರು.
ಬೃಂದಾ ಅವರು ನಾಚಿಕೆ ಸ್ವಭಾವದವರಾಗಿರುವುದರಿಂದ ಮಾಧ್ಯಮಗಳ ಮುಂದೆ ಬರಲು ಹಿಂಜರಿಯುತ್ತಾರೆ.ಹೀಗಾಗಿ ಮದುವೆ ವಿಚಾರವನ್ನು ಖಾಸಗಿಯಾಗಿ ಇಟ್ಟಿದ್ದೇವೆ ಎಂದು ವಾಸುಕಿ ಹೇಳಿಕೊಂಡಿದ್ದಾರೆ.
ನನ್ನ ಜೀವನದ ಪ್ರೀತಿಯನ್ನು ಮದುವೆಯಾಗುತ್ತಿದ್ದೇನೆ. ಇದಕ್ಕಿಂತ ಉತ್ತಮವಾದುದ್ದು ಏನಿದೆ. ಇದು ಎಂದೆಂದಿಗೂ ಅತ್ಯುತ್ತಮ ಫೀಲಿಂಗ್ ಎಂದು ವಾಸುಕಿ ವೈಭವ್ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…