ಬೆಂಗಳೂರು : ಕನ್ನಡ ಚಿತ್ರರಂಗದ ನಟ ಡಾಲಿ ಧನಂಜಯ್ ಅವರು ಅಭಿನಯಿಸಿರುವ ಹೆಡ್ ಬುಷ್ ಸಿನಿಮಾದಲ್ಲಿ ವೀರಗಾಸೆ ಕಲಾವಿದರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಡಾಲಿ ಧನಂಜಯ್ ಅವರೇ ಸ್ಪಷ್ಟನೆಯನ್ನು ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು ನಾನು ಕೂಡ ವೀರಭದ್ರ ದೇವರ ಆರಾಧಕ ಆಗಿರುವುದರಿಂದ ಯಾವುದೇ ಕಾರಣಕ್ಕೂ ಚಿತ್ರದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಿನಿಮಾವನ್ನು ನೋಡದವರು ಚಿತ್ರದ ಕುರಿತು ಆಕ್ಷೇಪ ಎತ್ತುತ್ತಿದ್ದಾರೆ. ಚಿತ್ರದಲ್ಲಿ ಅದು ನಿಜವಾದ ವೀರಗಾಸೆ ಕಲಾವಿದರ ಪಾತ್ರಧಾರಿಗಳಿಗೆ ನಾನು ಹೊಡೆಯುವ ದೃಶ್ಯವಲ್ಲ. ಬದಲಿಗೆ ವೀರಗಾಸೆ ಕಲಾವಿದರಿಗೆ ಅವಮಾನ ಮಾಡಿದ ಪಾತ್ರಧಾರಿಗಳಿಗೆ ನಾನು ಜಯರಾಜ್ ಪಾತ್ರಧಾರಿ ಆಗಿ ಹೊಡೆದಿರುವ ದೃಶ್ಯವದು. ನಿಜವಾದ ಕಲಾವಿದರ ಪಾತ್ರಧಾರಿಗಳು ಹಿಂದೆ ಚಪ್ಪಲಿ ಇಲ್ಲದೆ ಇದ್ದಾರೆ. ನಕಲಿ ಪಾತ್ರಧಾರಿಗಳು ಕಾಲಿಗೆ ಶೂ ಧರಿಸಿಕೊಂಡಿದ್ದಾರೆ. ನಾನು ವೀರಗಾಸೆ ಪಾತ್ರಗಳನ್ನು ಶಾಲೆ ಕಾಲೇಜುಗಳಲ್ಲಿ ಮಾಡುತ್ತಿದೆ. ನನಗೆ ಆ ಕಲೆಯ ಬಗ್ಗೆ ಅಪಾರವಾದ ಗೌರವವಿದೆ ಅವರಿಗೆ ನಾನು ಅವಮಾನ ಮಾಡಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…