ಚಿತ್ರ ಮಂಜರಿ

ಹಿರಿಯ ನಟ ಚಲಪತಿ ರಾವ್ ಹೃದಯಾಘಾತದಿಂದ ನಿಧನ

ಇತ್ತೀಚೆಗಷ್ಟೇ ತೆಲುಗು ಚಿತ್ರರಂಗದ ಹಿರಿಯ ನಟ ಸೂಪರ್ ಸ್ಟಾರ್ ಕೃಷ್ಣ ನಿಧನರಾಗಿದ್ದರು. ಈ ಬೆನ್ನಲ್ಲೇ ಟಾಲಿವುಡ್‌ನ ಮತ್ತೊಬ್ಬ ಹಿರಿಯ ನಟ ಚಲಪತಿ ರಾವ್ ನಿಧನರಾಗಿದ್ದಾರೆ. ಅವರ ಅನಿರೀಕ್ಷಿತ ಸಾವು ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ.

600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ 78ರ ವಯಸ್ಸಿನ ನಟ ಚಲಪತಿ ರಾವ್ ಇನ್ನಿಲ್ಲ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಭಾನುವಾರ (ಡಿ.25) ಬೆಳಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಬ್ಬರು ಪುತ್ರಿಯರು, ಪುತ್ರ ಮತ್ತು ಪತ್ನಿಯನ್ನು ಅಗಲಿದ್ದಾರೆ.  ಖಳನಟ, ಪೋಷಕ ನಟ, ಹಾಸ್ಯ ಪಾತ್ರಗಳ ಮೂಲಕ ರಂಜಿಸಿದ್ದ ಮಹಾನ್ ಪ್ರತಿಭೆ ಚಲಪತಿ ರಾವ್ ನಿಧನಕ್ಕೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ. ಇನ್ನೂ ಅಮೆರಿಕದಲ್ಲಿರುವ ಪುತ್ರಿಯ ಆಗಮನ ನಂತರ (ಡಿ.28) ಮಧ್ಯಾಹ್ನ 3 ಗಂಟೆಯ ನಂತರ ನಟನ ಅಂತ್ಯಕ್ರಿಯೆ ನಡೆಯಲಿದೆ. ಪಾರ್ಥಿವ ಶರೀರವನ್ನು ಭಾನುವಾರ ಮಧ್ಯಾಹ್ನದವರೆಗೆ ಅಭಿಮಾನಿಗಳ ಭೇಟಿಗಾಗಿ ಬಂಜಾರಾ ಹಿಲ್ಸ್ನಲ್ಲಿರುವ ರವಿಬಾಬು ಅವರ ಮನೆಯಲ್ಲಿ ಇರಿಸಲಾಗಿದೆ.

andolanait

Recent Posts

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

53 mins ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

2 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

6 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

7 hours ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

11 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

11 hours ago