ಬೆಂಗಳೂರು : ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಹು ಭಾಷಾ ನಟ ಕಿಶೋರ್ ಕುಮಾರ್ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಮಣಿಪುರ ಮತ್ತು ಹರಿಯಾಣದಲ್ಲಿ ನಡೆಯುತ್ತಿರುವ ಘಟನೆಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, ʼʼವಿಶ್ವಗುರುಗಳಿದ್ದಾರೆ ಎಚ್ಚರ .. ಈ ವಿಕೃತ ವಿಶ್ವಗುರುವನ್ನು ಹೊಡೆದೋಡಿಸಿ, ಪ್ರೀತಿಯ ಶಾಂತಿಯ ನಮ್ಮ ಭಾರತಕ್ಕೆ ಮರಳಬೇಕಿದೆʼʼ ಎಂದು ಕರೆ ಕೊಟ್ಟಿದ್ದಾರೆ.
https://www.instagram.com/p/CvgZahOP1N2/
ʼʼಮಣಿಪುರದಲ್ಲಿ, ಹರಿಯಾಣದಲ್ಲಿ, ಮುಂಬೈ ರೈಲಿನಲ್ಲಿ , ಟಿವಿ ಚಾನೆಲ್ಲುಗಳಲ್ಲಿ , ಪಾರ್ಲಿಮೆಂಟಿನಲ್ಲಿ , ಕಪಟ ಕ್ಯಾಪಿಟಲಿಸ್ಟುಗಳ ಡ್ರಾಯಿಂಗು ರೂಮಿನಲ್ಲಿ , ಕೋರ್ಟು ಕಚೇರಿಗಳಲ್ಲಿ , ಪೋಲೀಸು ವೇಷದಲ್ಲಿ , ಐಟಿ ಸೆಲ್ಲುಗಳಲ್ಲಿ, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ದೇಶದ ಮೂಲೆ ಮೂಲೆಯಲ್ಲಿ..ದೇವರ ಹೆಸರಲ್ಲಿ, ಅಧಿಕಾರ ದಾಹದ ಹೊಲಸಲ್ಲಿ , ಮತಿಭ್ರಮಿತರಾದ ಮತಾಂಧ ವಿಶ್ವಗುರುಗಳಿದ್ದಾರೆ.. ಎಚ್ಚರʼʼ ಎಂದು ಕಿಡಿಕಾರಿದ್ದಾರೆ.
ಮುಂದುವರಿದು ʼʼಇವರಿಗೆ ಜೈ ಅನ್ನದಿದ್ದರೆ, ಇವರನ್ನು ಪ್ರಶ್ನಿಸಿದರೆ … ಯೋಚಿಸಿದರೂ ಸಹ … ಗುಂಡಿಕ್ಕುತ್ತಾರೆ, ಬಡಿದು ಕೊಲ್ಲುತ್ತಾರೆ, ಮನೆ ಮಠ ಸುಡುತ್ತಾರೆ, ಕೆಡವುತ್ತಾರೆ, ಮಕ್ಕಳನ್ನು ಕಡಿದು ಕೊಲ್ಲುತ್ತಾರೆ. ಬೆತ್ತಲೆ ಮೆರವಣಿಗೆ ಮಾಡಿಸಿ ಅತ್ಯಾಚಾರ ಮಾಡುತ್ತಾರೆ, ದೇಶದ ಕೀರ್ತಿ ವಿಶ್ವದಲ್ಲೆಲ್ಲ ಹರಡುತ್ತಾರೆ..ʼʼ ಎಂದು ಕಿಶೋರ್ ಕುಮಾರ್ ಬರೆದುಕೊಂಡಿದ್ದಾರೆ.
ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…
ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…
ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…