ಮುಂಬೈ: ಪ್ರಭಾಸ್ ಅಭಿನಯದ ‘ಆದಿಪುರುಷ್’ ಚಿತ್ರವು ಭಾಷಾ ಬಳಕೆಗಾಗಿ ವ್ಯಾಪಕ ಟೀಕೆಗೋಳಗಾದ ನಂತರ ಪೌರಾಣಿಕ ಕಥಾ ಚಿತ್ರದ ನಿರ್ಮಾಪಕರು “ಕೆಲವು ಸಂಭಾಷಣೆಗಳನ್ನು ಪರಿಷ್ಕರಿಸಲು” ನಿರ್ಧರಿಸಿದ್ದಾರೆ ಎಂದು ಚಿತ್ರದ ಸಂಭಾಷಣೆ ಬರಹಗಾರ ಮನೋಜ್ ಮುಂತಾಶಿರ್ ಶುಕ್ಲಾ ಭಾನುವಾರ ಹೇಳಿಕೆ ನೀಡಿದ್ದಾರೆ.
ಹಿಂದಿ ಸಂಭಾಷಣೆಗಳು ಮತ್ತು ಹಾಡುಗಳನ್ನು ಬರೆದಿರುವ ಶುಕ್ಲಾ, ಈ ವಾರದೊಳಗೆ ತಿದ್ದುಪಡಿ ಮಾಡಿದ ಸಾಲುಗಳನ್ನು ಚಿತ್ರಕ್ಕೆ ಸೇರಿಸಲಾಗುವುದು ಎಂದು ಹೇಳಿದ್ದಾರೆ.
“ನನಗೆ ನಿಮ್ಮ ಭಾವನೆಗಳಿಗಿಂತ ದೊಡ್ಡದು ಏನೂ ಇಲ್ಲ. ನನ್ನ ಡೈಲಾಗ್‌ಗಳ ಪರವಾಗಿ ನಾನು ಲೆಕ್ಕವಿಲ್ಲದಷ್ಟು ವಾದಗಳನ್ನು ನೀಡಬಲ್ಲೆ, ಆದರೆ ಇದು ನಿಮ್ಮ ನೋವನ್ನು ಕಡಿಮೆ ಮಾಡುವುದಿಲ್ಲ. ನಾನು ಮತ್ತು ಚಿತ್ರದ ನಿರ್ಮಾಪಕ-ನಿರ್ದೇಶಕರು ನಿಮಗೆ ನೋವುಂಟು ಮಾಡುವ ಕೆಲವು ಸಂಭಾಷಣೆಗಳನ್ನು ಪರಿಷ್ಕರಿಸಲು ನಿರ್ಧರಿಸಿದ್ದೇವೆ. ಅವುಗಳನ್ನು ಈ ವಾರ ಚಿತ್ರಕ್ಕೆ ಸೇರಿಸುತ್ತೇವೆ ಎಂದು ಶುಕ್ಲಾ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಿಂದಿ, ತೆಲುಗು, ಕನ್ನಡ, ಮಲಯಾಳಂ ಮತ್ತು ತಮಿಳಿನಲ್ಲಿ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾದ ”ಆದಿಪುರುಷ್”, ರಾಘವ್ (ರಾಮ) ಆಗಿ ಪ್ರಭಾಸ್, ಜಾನಕಿ (ಸೀತೆ) ಆಗಿ ಕೃತಿ ಸನೋನ್ ಮತ್ತು ಲಂಕೇಶ (ರಾವಣ) ಆಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ.
ಓಂ ರಾವುತ್ ನಿರ್ದೇಶಿಸಿದ ಮತ್ತು ಟಿ-ಸೀರೀಸ್ ನಿರ್ಮಿಸಿದ, ಬಿಗ್ ಬಜೆಟ್ ಚಿತ್ರ ”ಆದಿಪುರುಷ್” ಅದರ ಕಳಪೆ ವಿಎಫ್‌ಎಕ್ಸ್ ಮತ್ತು ಆಡುಮಾತಿನ ಸಂಭಾಷಣೆಗಳಿಗಾಗಿ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಟೀಕೆಗೆ ಮತ್ತು ಆಕ್ರೋಶಕ್ಕೆ ಒಳಗಾಗಿದೆ. ಶುಕ್ಲಾ ಅವರು ‘ಲಂಕಾ ದಹನ’ ಸನ್ನಿವೇಶದಲ್ಲಿ ಬಳಸಿರುವ ಹನುಮಂತನ ಸಂಭಾಷಣೆಗಾಗಿ ವ್ಯಾಪಕ ಟೀಕೆ ಎದುರಿಸಿದ್ದಾರೆ.
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…
ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…
ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…