ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ಗೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಇಬ್ಬರು ಹೊಸ ಅಭ್ಯರ್ಥಿಗಳು ದೊಡ್ಮನೆಯೊಳಗೆ ಕಾಲಿಟ್ಟಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯು ಪ್ರೋಮೋವೊಂದನ್ನು ರಿಲೀಜ್ ಮಾಡಿದ್ದು, ದೊಡ್ಮನೆಯೊಳಗೆ ಕಾಲಿಟ್ಟವರು ಯಾರು ಎಂಬ ಕುತೂಹಲ ಮೂಡಿಸಿದೆ.
ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್ ಬಾಸ್ ಮನೆಯೊಳಗೆ ಪವಿತ್ರ ಪೂವಪ್ಪ ಹಾಗೂ ಅಸ್ತಿಕ್ ಅವಿನಾಶ್ ಶೆಟ್ಟಿ ಕಾಲಿಟ್ಟಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿರುವ ಪ್ರೋಮೋದಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿಯಾದ ಅಭ್ಯರ್ಥಿಗಳ ಮೂಕವನ್ನು ರಿವೀಲ್ ಮಾಡಿಲ್ಲ. ಹಾಗಾಗಿ ಬಿಗ್ ಬಾಸ್ ಮನೆಯೋಳಗೆ ಬಂದಿರುವ ಹೊಸ ಅಭ್ಯರ್ಥಿಗಳು ಯಾರು ಎನ್ನುವ ಕುತೂಹಲ ಮೂಡಿದೆ.
ಆದರೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಯೊಳಗೆ ಬಂದಿರುವ ಇಬ್ಬರು ಅಬ್ಯರ್ಥಿಗಳ ಪೈಕಿ ಪವಿತ್ರ ಪೂವಪ್ಪ ಅವರು ಮಾಡೆಲ್ ಆಗಿದ್ದು, ಹಲವಾರು ಶೋಗಳಲ್ಲಿ ಭಾಗವಹಿಸಿದ್ದಾರೆ. ಅಲ್ಲದೆ ಸಖತ್ ಬೋಲ್ಡ್ ಆಗಿ ಫೋಟೊಶೂಟ್ ಮಾಡಿಸಿ ಮಿಂಚಿದ್ದಾರೆ. ಇದೀಗ ಅಷ್ಟೇ ಬೋಲ್ಡ್ ಆಗಿ ಕೆಂಪು ಬಣ್ಣದ ಕಾರಿನಲ್ಲಿ ಬಿಗ್ ಬಾಸ್ ಮನೆಗೆ ಎಂಟ್ರಿಯಾಗಿದ್ದು, ದೊಡ್ಮನೆಯಲ್ಲಿ ಪವಿತ್ರ ಅವರ ಆಟ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.
ಇನ್ನೂ ಮನೆಯೊಳಗೆ ಬಂದಿರುವ ಮತ್ತೊಬ್ಬ ಅಭ್ಯರ್ಥಿ ಅಸ್ತಿಕ್ ಅವಿನಾಶ್ ಶೆಟ್ಟಿಯವರು ಒಬ್ಬ ನಟನಾಗಿದ್ದು ಶ್ರೀಮಂತ ಚಿತ್ರದಲ್ಲಿ ನಟಿಸಿದ್ದಾರೆ.
ಇನ್ನು ಮನೆಯೊಳಗೆ ವೈಲ್ಡ್ ಕಾರ್ಡ್ ಎಂಟ್ರಿ ಆಗುತ್ತಿದ್ದಂತೆ ಮನೆಯೊಳಗಿದ್ದ ಸ್ಪರ್ದಿಗಳಿಗೆ ಚಿಂತೆ ಶುರುವಾದಂತಿದೆ. ಕಲರ್ಸ್ ಕನ್ನಡ ಹಂಚಿಕೊಂಡಿರುವ ಪ್ರೋಮೋದಲ್ಲಿ ಪವಿತ್ರ ಅವರು ಈ ಶಾಕ್ ಬೇಕು. ಅವರಿಗೆ ಬೆವರು ಇಳಿಸೋಣ ಎಂದಿದ್ದಾರೆ. ಇನ್ನು ವಿನಯ್ ಕಾರ್ತಿಕ್ ಬಳಿ ವೈಲ್ಡ್ ಕಾರ್ಡ್ ಎಂಟ್ರಿ ಆದರೆ ಹಾಟ್ ಸೀಟ್ ಗಳಾಗುತ್ತವೆ ಎಂದಿದ್ದಾರೆ.
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…