ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಬಿಗ್ ಬಜೆಟ್ ಚಿತ್ರಗಳಲ್ಲಿ ಒಂದಾಗಿರುವ ಪ್ರಭಾಸ್ ಅವರ ʼಆದಿಪುರುಷ್ʼ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಎಲ್ಲೆಡೆ ಭರ್ಜರಿ ಸೌಂಡ್ ಮಾಡುತ್ತಿದೆ. ಈ ನಡುವೆ ಸಿನಿಮಾದ ಟ್ರೇಲರ್ ಒಂದು ಹೊಸ ದಾಖಲೆಯನ್ನು ಬರೆದಿದೆ.
ʼಆದಿಪುರುಷ್ʼ ಚಿತ್ರಕ್ಕೆ ಓಂ ರಾವುತ್ ಅವರ ನಿರ್ದೇಶನವಿದೆ. “ಟಿ-ಸೀರಿಸ್ʼ ಸಂಸ್ಥೆ ನಿರ್ಮಾಣ ಮಾಡಿದ್ದು, ವಾಲ್ಮೀಕಿ ಬರೆದ ರಾಮಾಯಣದ ಅಂಶಗಳನ್ನು ಆಧರಿಸಿ ಸಿನಿಮಾವನ್ನು ತೆರೆಗೆ ತರಲಾಗುತ್ತಿದೆ.
ಸಿನಿಮಾದಲ್ಲಿ ಪ್ರಭಾಸ್ ʼರಾಘವʼನಾಗಿ, ಕೃತಿ ಸನೊನ್ ʼಜಾನಕಿʼ ಆಗಿ ಕಾಣಿಸಿಕೊಳ್ಳಲಿದ್ದಾರೆ. ಸೈಫ್ ಆಲಿಖಾನ್ ರಾವಣನ ಅವತಾರದಲ್ಲಿ ಅಬ್ಬರಿಸಲಿದ್ದಾರೆ. ಈಗಾಗಲೇ ಸಿನಿಮಾದ ಟ್ರೇಲರ್ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.
ವಿಎಫ್ ಎಕ್ಸ್, ಮ್ಯೂಸಿಕ್ ನಿಂದ ಟ್ರೇಲರ್ ಗಮನ ಸೆಳೆದಿದೆ. ಪ್ಯಾನ್ ಇಂಡಿಯಾದಲ್ಲಿ ಟ್ರೇಲರ್ ಸದ್ದು ಮಾಡಿದೆ. ಎಲ್ಲಾ ಭಾಷೆಯಲ್ಲಿ ಸೇರಿ ರಿಲೀಸ್ ಆದ 24 ಗಂಟೆಯಲ್ಲಿ ಟ್ರೇಲರ್ 70 ಮಿಲಿಯನ್ ಗೂ ಹೆಚ್ಚಿನ ವೀಕ್ಷಣೆ ಕಂಡಿದೆ. ಆ ಮೂಲಕ 2023ರಲ್ಲಿ ಅತೀ ಹೆಚ್ಚು ವೀಕ್ಷಣೆ ಕಂಡ ಟ್ರೇಲರ್ ಎಂಬ ಹೆಗ್ಗಳಿಕೆಯನ್ನು ʼಆದಿಪುರುಷ್ʼ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೆ ಯೂಟ್ಯೂಬ್ ನಲ್ಲಿ ಟ್ರೇಲರ್ ನಂ. 1 ಆಗಿ ಟ್ರೆಂಡಿಂಗ್ ನಲ್ಲಿದೆ.
ಇದೇ ಜೂ.16 ರಂದು 3ಡಿಯಲ್ಲಿ ವಿಶ್ವಾದಂತ್ಯ ಸಿನಿಮಾ ತೆರೆಗೆ ಬರಲಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…