ಚಿತ್ರ ಮಂಜರಿ

ವಿದ್ಯಾಭ್ಯಾಸದ ಸಲುವಾಗಿ ಮಗನ್ನು ದೂರ ಇಟ್ಟಿದ್ವಿ : ವಿನೋದ್‌ ರಾಜ್

ತಾಯಿಯ ಸಾವಿನ ನೋವಿನಲ್ಲಿರುವ ನಟ ವಿನೋದ್‌ ರಾಜ್‌ ಅವರು ತಮ್ಮ ಮಗನ್ನು ದೂರ ಇಟ್ಟಿದ್ದ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಮಗನನ್ನು ಇಷ್ಟು ವರ್ಷಗಳ ಕಾಲ ಯಾಕೆ ದೂರ ಇರಿಸಿದ್ದರು ಎಂಬುದನ್ನು ಬಹಿರಂಗ ಪಡಿಸಿರುವ ವಿನೋದ್‌ ರಾಜ್‌ ನನ್ನ ತಾಯಿ ನನ್ನನ್ನು ಹೇಗೆ ತಿದ್ದಿ ಪಾಠ ಹೇಳಿ ಬೆಳೆಸಿದ್ದರೋ ಅದೇ ರೀತಿ ನನ್ನ ಪತ್ನಿ ಕೂಡ ನನ್ನ ಮಗನನ್ನು ಬೆಳೆಸಿದ್ದಾರೆ. ಚೆನ್ನೈನಲ್ಲಿ ಇದ್ದರೂ ಕೂಡ ಕನ್ನಡ ಚೆನ್ನಾಗಿಯೇ ಮಾತನಾಡುತ್ತಾರೆ. ಇಲ್ಲಿದ್ದಾಗ ಮಗ ಹಾಗೂ ಪತ್ನಿಯ ಬಗ್ಗೆ ಏನೇನೋ ಮಾತು ಬರೋದು ಬೇಡ ಅಂತ ನನ್ನಮ್ಮ ಅವರನ್ನು ಮದ್ರಾಸ್‌ ನಲ್ಲಿ ಇರಿಸಿದ್ದರು. ಮಗನ ವಿದ್ಯಾಭ್ಯಾಸಕ್ಕಾಗಿ ಅವನನ್ನು ನಮ್ಮಿಂದ ದೂರ ಇಟ್ಟಿದ್ದೆವು. ಅದರಂತೆ ಈಗ ನನ್ನ ಮಗ ಚೆನ್ನಾಗಿ ಓದಿ ಕೆಲಸದಲ್ಲಿ ಇದ್ದಾರೆ. ತಿಂಗಳಿಗೆ 50 ಸಾವಿರ ಸಂಬಳ ಬರುತ್ತದೆ ಎಂದಿದ್ದಾರೆ.

ತಮ್ಮ ತಾಯಿ ಲೀಲಾವತಿ ಅವರ ಬಗ್ಗೆ ಮಾತನಾಡಿರುವ ನಟ ವಿನೋದ್‌ ರಾಜ್‌ ತಮ್ಮ ತಾಯಿಯ ಕೊನೆಯ ಆಸೆ ಏನಾಗಿತ್ತು ಎಂಬುದನ್ನು ಬಿಚ್ಚಿಟ್ಟಿದ್ದಾರೆ. ನನ್ನ ತಾಯಿಗೆ ದೇವಸ್ಥಾನಗಳಿಗೆ ಭೇಟಿ ನೀಡುವ ಆಸೆ ಇತ್ತು. ಎಂದಿದ್ದಾರೆ.

ಅಮ್ಮನಿಗೋಸ್ಕರ ಗುಡಿ ಕಟ್ಟಲೇ ಬೇಕು. ಇದರ ಬಗ್ಗೆ ಯೋಚಿಸಿ ಮಾಡುತ್ತೇವೆ ಅಮ್ಮನ ಸ್ಮಾರಕ ಮಾಡುವ ಚಿಂತನೆ ಇದೆ ಎಂದಿದ್ದಾರೆ.

ವಯೋ ಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿಯವರು ಮೊನ್ನೆ ಇಹಲೋಕ ತ್ಯಜಿಸಿದ್ದರು. ನಟಿ ಲೀಲಾವತಿಯವರನ್ನು ಅವರ ಅಂತ್ಯಕ್ರಿಯೆಯನ್ನು ಬೆಂಗಳೂರು ಹೊರವಲಯದ ನೆಲಮಂಗಲದ ಸೋಲದೆವನಹಳ್ಳಿಯಲ್ಲಿರುವ ಅವರ ನೆಚ್ಚಿನ ತೋಟದಲ್ಲಿಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಚಿತ್ರರಂಗದ ಹಲವು ನಟ ನಟಿಯರು ಹಾಗೂ ರಾಜಕೀಯ ಗಣ್ಯರು ಮೇರು ಕಲಾವಿದೆ ಲೀಲಾವತಿಯವರ ಅಂತಿಮ ದರ್ಶನ ಪಡೆದರು.

lokesh

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

7 mins ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

16 mins ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

52 mins ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

1 hour ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

1 hour ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

1 hour ago