ಆಂದೋಲನ ಪುರವಣಿ

ಸಿನಿಮಾಲ್‌ : ʼ13ʼಕ್ಕೆ ಮೂರಲ್ಲ ಆರು ತಿಂಗಳಾಯಿತು

ಅಂತರ್ಮತೀಯ ಪ್ರೆಮಕಥೆಯನ್ನು ಹೇಳುವ ಚಿತ್ರವನ್ನು ಕೆ.ನರೇಂದ್ರಬಾಬು ನಿರ್ದೇಶಿಸಿದ್ದಾರೆ. ಅದರ ಹೆಸರು ‘13’. ಚಿತ್ರ ಮತ್ತು ಅದರ ಚಿತ್ರೀಕರಣದ ಕುರಿತಂತೆ ಅವರು ಹೇಳುವುದು ಹೀಗೆ: ಗಂಡ- ಹೆಂಡತಿ ಅಂದರೆ ಹೀಗಿರಬೇಕು ಎನ್ನುವಂತಿದ್ದ ದಂಪತಿಗಳಿಬ್ಬರೂ ತಮ್ಮದಲ್ಲದ ತಪ್ಪಿಗೆ ಇಡೀ ಜೀವನ ಯಾವ ರೀತಿ ಕಷ್ಟ ಪಡುತ್ತಾರೆ ಎಂಬುದನ್ನು ಹೇಳುವ, ಮನುಷ್ಯ ಸಂಬಂಧಗಳನ್ನು ಬೆಸೆಯುವ ಕಥೆಯಿದು. ಮುಹೂರ್ತದ ಸಂದರ್ಭದಲ್ಲಿ ಮೂರು ತಿಂಗಳಲ್ಲಿ ಮೊದಲ ಪ್ರತಿ ಹೊರತರುತ್ತೇನೆ ಎಂದು ಹೇಳಿದ್ದೆ, ಆದರೆ ಸಾಕಷ್ಟು ಅಡೆತಡೆಗಳುಂಟಾಗಿ ಆರು ತಿಂಗಳಾಯಿತು.

ಒಬ್ಬರಿಗೆ ಹಾರ್ಟ್‌ಅಟ್ಯಾಕ್ ಆಯ್ತೂ, ನನ್ನ ಕಾಲಿಗೂ ಪೆಟ್ಟಾಗಿ ಇನ್ನೂ ಸರಿಯಾಗಿಲ್ಲ, ಕೊಟ್ಟಿಗೆ ಹಾರದಲ್ಲಿ ಮಾಡಬೇಕೆಂದಿದ್ದ ಸೀನನ್ನು ಮಂಡ್ಯ ಹತ್ತಿರದ ಹಳ್ಳಿಯೊಂದರಲ್ಲಿ ಮಾಡಿದ್ದೇನೆ. ನನ್ನ ತಂಡ ಜೊತೆ ನಿಂತಿದ್ದರಿಂದ ಇಲ್ಲಿಯವರೆಗೆ ಬಂದಿದ್ದೇನೆ. ನಾಲ್ವರು ನಿರ್ಮಾಪಕರು ನಾಲ್ಕು ಕಂಬಗಳಂತೆ ನಿಂತಿದ್ದಾರೆ. ರಾಗಣ್ಣ ಅವರನ್ನು ಈ ವರೆಗೆ ನೋಡಿದ್ದಕ್ಕಿಂತ ಬೇರೆಯದೇ ರೀತಿ ನೋಡಬಹುದು. ರಾಘವೇಂದ್ರ ರಾಜ್‌ಕುಮಾರ್, ಶ್ರುತಿ ಜೋಡಿಯ ಈ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಅವರು ಪ್ರಮುಖ ಪಾತ್ರಧಾರಿ. ಯುವಿ ಪ್ರೊಡಕ್ಷನ್ ಲಾಂಛನದಲ್ಲಿ ಈ ಚಿತ್ರವನ್ನು ಸಂಪತ್‌ಕುಮಾರ್, ಮಂಜುನಾಥ್, ಮಂಜುನಾಥಗೌಡ ಸೇರಿ ನಿರ್ಮಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡದೆ ಒಂದು ನೈಜ ಘಟನೆ ಈ ಚಿತ್ರಕ್ಕೆ ಸ್ಛೂರ್ತಿ ಎನ್ನಲಾಗಿದೆ. ಮಂಜುನಾಥ್ ನಾಯ್ಡು ಛಾಯಾಗ್ರಹಣ ಹಾಗೂ ಸೋಹನ್ ಬಾಬು ಅವರ ಸಂಗೀತ ಈ ಚಿತ್ರಕ್ಕಿದೆ.

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

44 mins ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

46 mins ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

55 mins ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

1 hour ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

1 hour ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

1 hour ago