ಚಲನಚಿತ್ರಗಳಲ್ಲಿ ನಟಿಸಲು ಹೆಣ್ಣುಮಕ್ಕಳು ಹಿಂದೆ ಮುಂದೆ ನೋಡುವ ದಿನಗಳಿದ್ದವು. ಆದರೆ ಈಗ ಹಾಗಿಲ್ಲ. ಅಭಿನಯವನ್ನು ವೃತ್ತಿಯಾಗಿಸಿಕೊಳ್ಳಲು ಬಯಸಿ ಬರುವವರ ಸಂಖ್ಯೆ ಸಾಕಷ್ಟಿದೆ. ಸಿನಿಮಾ ಕುಟುಂಬದವರಲ್ಲದೆ, ತರಬೇತಿ ಪಡೆದು ಬರುವವರು, ಆಸಕ್ತಿಯಿಂದ ಬರುವವರು ಇದ್ದಾರೆ. ಆ ಸಾಲಿಗೆ ಹೊಸ ಸೇರ್ಪಡೆ ಕುಶಾಲನಗರದ ಮಧುರಾಗೌಡ. ಅವರು ಕನ್ನಡದ ?ರೆಡ್‌ರಮ್’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ರೂಪದರ್ಶಿ ಮತ್ತು ಅಭಿನಯ ತರಬೇತಿ ಪಡೆದಿರುವ ಮಧುರಾ ನಟಿಸುತ್ತಿರುವ ಚಿತ್ರದ ಚಿತ್ರೀಕರಣ ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದು ಅದರಲ್ಲಿ ಪಾಲ್ಗೊಂಡಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ. ಕೌಟಿಲ್ಯ ಸಿನಿಮಾ’ಸ್ ಹಾಗೂ ಹನಿ ಚೌಧರಿ ಫಿಲಂ’ಸ್ ಲಾಂಛನದಲ್ಲಿ ತಯಾರಾಗುತ್ತಿರುವ ?ರೆಡ್‌ರಮ್’ ಚಿತ್ರದ ಚಿತ್ರೀಕರಣದ ವೇಳೆಯಲ್ಲಿಯೇ ಅವರಿಗೆ ಬಹುತಾರಾಗಣದ ಚಿತ್ರವೊಂದರಲ್ಲಿ ನಟಿಸುವ ಅವಕಾಶ ಬಂದಿದೆಯಂತೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…