ಇತ್ತೀಚೆಗೆ ಸ್ಟುಡಿಯೋಗಳಲ್ಲಿ ಚಿತ್ರೀಕರಣ ಅಪರೂಪವಾಗತೊಡಗಿದೆ. ಸುಸಜ್ಜಿತ ಸ್ಟುಡಿಯೋಗಳೂ ಕಡಿಮೆ ಎನ್ನಿ. ಮನಸ್ಸು ಮಾಡುತ್ತಿದ್ದರೆ, ಬೆಂಗಳೂರಿನಲ್ಲಿರುವ ಕಂಠೀರವ ಸ್ಟುಡಿಯೋವನ್ನು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಬಹುದಾಗಿತ್ತು. ಕನ್ನಡ ಚಿತ್ರಗಳ ನಿರ್ಮಾಪಕರು ನೆರೆಯ ಆಂಧ್ರಪ್ರದೇಶದಲ್ಲಿರುವ ರಾಮೋಜಿ ಚಿತ್ರನಗರಿಯನ್ನು ಅವಲಂಬಿಸುತ್ತಾರೆ. ಈ ಪ್ರಸ್ತಾಪಕ್ಕೆ ಕಾರಣ ಮೊನ್ನೆ ಬೆಂಗಳೂರಿನ ರಾಮೋಹಳ್ಳಿಯಲ್ಲಿ ಈಗ ಸ್ಟುಡಿಯೋ ಆಗಿರುವ ಜಿ.ವಿ.ಅಯ್ಯರ್ ಅವರ ಮನೆಯಲ್ಲಿನ ಚಿತ್ರೀಕರಣವೊಂದರ ಸುದ್ದಿ. ಈಗ ಸಚಿವರಾಗಿರುವ ನಟ ಬಿ.ಸಿ.ಪಾಟೀಲ್ ಪತ್ನಿ ವನಜಾ ಪಾಟೀಲ್ ಹಾಗೂ ಪುತ್ರಿ ಸೃಷ್ಟಿ ಪಾಟೀಲ್ ನಿರ್ಮಿಸುತ್ತಿರುವ ಚಿತ್ರದ ಚಿತ್ರೀಕರಣದ ಮುಕ್ತಾಯ ಅಲ್ಲಿ ಆಯಿತು. ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರಕ್ಕಾಗಿ ಅಲ್ಲಿ ಗರಡಿಮನೆ ಸೆಟ್ ಹಾಕಲಾಗಿತ್ತು. ಪಾಟೀಲ್ ಅವರದು ಪೈಲ್ವಾನನ ಪಾತ್ರವಂತೆ. ಯಶಸ್ ಸೂರ್ಯ, ಸೋನಾಲ್ ಮೊಂತೆರೊ, ರವಿಶಂಕರ್, ಸುಜಯ್ ಬೇಲೂರು, ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ತಾರಾಗಣದ ಈ ಚಿತ್ರದಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟ ದರ್ಶನ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿದ್ದಾರೆ. ಯೋಗರಾಜ ಭಟ್ ಪ್ರಕಾರ, ಗರಡಿ ಹಳೇ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…