ಆಂದೋಲನ ಪುರವಣಿ

ಸಿನಿಮಾಲ್‌ : ಅಯ್ಯರ್‌ ಸ್ಟುಡಿಯೋದಲ್ಲಿ ʼಗರಡಿʼ

ಇತ್ತೀಚೆಗೆ ಸ್ಟುಡಿಯೋಗಳಲ್ಲಿ ಚಿತ್ರೀಕರಣ ಅಪರೂಪವಾಗತೊಡಗಿದೆ. ಸುಸಜ್ಜಿತ ಸ್ಟುಡಿಯೋಗಳೂ ಕಡಿಮೆ ಎನ್ನಿ. ಮನಸ್ಸು ಮಾಡುತ್ತಿದ್ದರೆ, ಬೆಂಗಳೂರಿನಲ್ಲಿರುವ ಕಂಠೀರವ ಸ್ಟುಡಿಯೋವನ್ನು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಬಹುದಾಗಿತ್ತು. ಕನ್ನಡ ಚಿತ್ರಗಳ ನಿರ್ಮಾಪಕರು ನೆರೆಯ ಆಂಧ್ರಪ್ರದೇಶದಲ್ಲಿರುವ ರಾಮೋಜಿ ಚಿತ್ರನಗರಿಯನ್ನು ಅವಲಂಬಿಸುತ್ತಾರೆ. ಈ ಪ್ರಸ್ತಾಪಕ್ಕೆ ಕಾರಣ ಮೊನ್ನೆ ಬೆಂಗಳೂರಿನ ರಾಮೋಹಳ್ಳಿಯಲ್ಲಿ ಈಗ ಸ್ಟುಡಿಯೋ ಆಗಿರುವ ಜಿ.ವಿ.ಅಯ್ಯರ್‌ ಅವರ ಮನೆಯಲ್ಲಿನ ಚಿತ್ರೀಕರಣವೊಂದರ ಸುದ್ದಿ. ಈಗ ಸಚಿವರಾಗಿರುವ ನಟ ಬಿ.ಸಿ.ಪಾಟೀಲ್ ಪತ್ನಿ ವನಜಾ ಪಾಟೀಲ್ ಹಾಗೂ ಪುತ್ರಿ ಸೃಷ್ಟಿ ಪಾಟೀಲ್ ನಿರ್ಮಿಸುತ್ತಿರುವ ಚಿತ್ರದ ಚಿತ್ರೀಕರಣದ ಮುಕ್ತಾಯ ಅಲ್ಲಿ ಆಯಿತು. ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರಕ್ಕಾಗಿ ಅಲ್ಲಿ ಗರಡಿಮನೆ ಸೆಟ್ ಹಾಕಲಾಗಿತ್ತು. ಪಾಟೀಲ್ ಅವರದು ಪೈಲ್ವಾನನ ಪಾತ್ರವಂತೆ. ಯಶಸ್ ಸೂರ್ಯ, ಸೋನಾಲ್ ಮೊಂತೆರೊ, ರವಿಶಂಕರ್, ಸುಜಯ್‌ ಬೇಲೂರು, ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ತಾರಾಗಣದ ಈ ಚಿತ್ರದಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟ ದರ್ಶನ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿದ್ದಾರೆ. ಯೋಗರಾಜ ಭಟ್ ಪ್ರಕಾರ, ಗರಡಿ ಹಳೇ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

43 mins ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

46 mins ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

55 mins ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

1 hour ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

1 hour ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

1 hour ago