ಮನರಂಜನೋದ್ಯಮದಲ್ಲಿ 3,000 ಕೋಟಿ ರೂ. ಹೂಡಲಿರುವ
ಹೊಂಬಾಳೆ ಸಂಸ್ಥೆಯ ‘ಕಾಂತಾರ’ ಆಸ್ಕರ್ ಅಂಗಳದಲ್ಲಿ
ಹೊಂಬಾಳೆ ಸಂಸ್ಥೆ ನಿರ್ಮಿಸಿರುವ ‘ಕಾಂತಾರ’ ಚಿತ್ರ ಅಕಾಡೆಮಿ ಪ್ರಶಸ್ತಿಗಳ ಸ್ಪರ್ಧೆಗೆ ಅರ್ಹತೆ ಪಡೆದಿರುವ ದೇಶವಿದೇಶಗಳ 301 ಚಿತ್ರಗಳಲ್ಲಿ ಒಂದು. ಇದಕ್ಕಾಗಿ ಸಂಸ್ಥೆ ಹರ್ಷ ವ್ಯಕ್ತಪಡಿಸಿದೆ. ಇದೀಗ ಕಳೆದ ವರ್ಷದ ದಾಖಲೆಗೆ ಹೊಸ ಸೇರ್ಪಡೆ. ಕಳೆದ ವರ್ಷ ಕನ್ನಡ ಚಿತ್ರಗಳ ಮಾರುಕಟ್ಟೆ ಸಾಧ್ಯತೆಯನ್ನು ತೋರಿಸಿಕೊಟ್ಟಿತು. ಅದು ನಿರ್ಮಿಸಿದ ‘ಕೆಜಿಎಫ್ ಚಾಪ್ಟರ್ 2’ ಮತ್ತು ‘ಕಾಂತಾರ’ ಚಿತ್ರಗಳು ಗಲ್ಲಾಪೆಟ್ಟಿಗೆ ಗಳಿಕೆಯಲ್ಲಿ ದಾಖಲೆ ಬರೆಯಿತು. ಕನ್ನಡದಲ್ಲಿ ನಿರ್ಮಿಸಿ, ಇತರ ಭಾಷೆಗಳಿಗೆ ಡಬ್ ಮಾಡುವುದಷ್ಟೇ ಅಲ್ಲದೆ, ಇತರ ಭಾಷೆಗಳಲ್ಲೂ ಹೊಂಬಾಳೆ ಚಿತ್ರಗಳನ್ನು ನಿರ್ಮಿಸುತ್ತಿದೆ. ‘ಮುಂದಿನ 5 ವರ್ಷಗಳಲ್ಲಿ ಮನರಂಜನಾ ಕ್ಷೇತ್ರದಲ್ಲಿ ಸುಮಾರು ಮೂರು ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲು ಉದ್ದೇಶಿಸಿದ್ದೇವೆ’ ಎಂದು ಹೊಂಬಾಳೆಯ ವಿಜಯ್ ಕಿರಗಂದೂರು ತಮ್ಮ ನಿರ್ಮಾಣ ಸಂಸ್ಥೆಯ ಜಾಲತಾಣದಲ್ಲಿ ಹೊಸ ವರ್ಷದ ಶುಭಾಶಯ ಕೋರುತ್ತಾ ಪ್ರಕಟಿಸಿದ್ದಾರೆ.
‘ಹೊಂಬಾಳೆ ಫಿಲಮ್ಸ್ ಸಂಸ್ಥೆ ಇಂದು ದೇಶದ ಪ್ರತಿಷ್ಠಿತ ಚಿತ್ರ ನಿರ್ಮಾಣ ಎಂಬ ಹೆಗ್ಗಳಿಕೆ ಪಡೆದಿರುವುದು ಚಿತ್ರ ಪ್ರೇಮಿಗಳ ಬೆಂಬಲದಿಂದ’ ಎಂದಿರುವ ಅವರು, ‘ನಾಡಿನ ಇತಿಹಾಸ, ಪರಂಪರೆ, ಕಲೆ- ಸಂಸ್ಕೃತಿ, ಮತ್ತು ಸಂಪ್ರದಾಯಗಳನ್ನು ವಿಶ್ವಕ್ಕೆ ಪರಿಚಯಿಸುವ ಇನ್ನಷ್ಟು ಉತ್ತಮ ಗುಣಮಟ್ಟದ ಚಲನಚಿತ್ರಗಳನ್ನುನಿರ್ಮಿಸಿ ನಾಡಿಗೆ ಸಮರ್ಪಿಸುವ ಸಂಕಲ್ಪ ಮಾಡಿದ್ದೇವೆ. ಇಂದು ಮನರಂಜನಾ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು ನಮ್ಮ ದೇಶದಲ್ಲಿ ವೈವಿದ್ಯಮಯ ಗುಣಮಟ್ಟದ ಚಿತ್ರ ನಿರ್ಮಾಣಕ್ಕೆ ವಿಫುಲ ಅವಕಾಶವಿದೆ. ದೇಶದ ಯುವಪೀಳಿಗೆಯನ್ನು ಜಾಗೃತಗೊಳಿಸುವ ಮತ್ತು ಹೆಚ್ಚು ಪ್ರೋತ್ಸಾಹಿಸುವ ಸಲುವಾಗಿ ಮನರಂಜನಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಸೇವೆ ಮಾಡಲು ನಾವು ಉದ್ದೇಶಿಸಿದ್ದೇವೆ. ನಾಡಿನ ಜನತೆ ಹೊಂಬಾಳೆ ಫಿಲಮ್ಸ್ ಮೇಲೆ ಇಟ್ಟಿರುವ ನಂಬಿಕೆ, ಭರವಸೆಗಳನ್ನು ಹುಸಿಯಾಗದಂತೆ ನೋಡಿಕೊಳ್ಳಲು ನಾವು ಬದ್ಧರಾಗಿದ್ದು, ಇನ್ನಷ್ಟು ಹೊಸತನದ ವಿಭಿನ್ನ ಚಿತ್ರಗಳನ್ನು ನಿರ್ಮಿಸುವ ಮೂಲಕ ಮನರಂಜನಾ ಕ್ಷೇತ್ರಕ್ಕೆ ಇನ್ನಷ್ಟು ಕೊಡುಗೆ ನೀಡುವ ಸಂಕಲ್ಪ ಮಾಡಿದ್ದೇವೆ’ ಎಂದಿದ್ದಾರೆ.
ಚಿತ್ರ ನಿರ್ಮಾಣ ಮಾತ್ರವಲ್ಲದೆ, ಮನರಂಜನೋದ್ಯಮ ಕ್ಷೇತ್ರಕ್ಕೆ ಬೇರೆ ರೀತಿಯಲ್ಲಿ ಈ ಹೂಡಿಕೆ ಆಗಲಿದೆೆಯೇ ಎನ್ನುವುದರ ಕುರಿತಂತೆ ಅಲ್ಲೇನೂ ಹೇಳಿಲ್ಲ. ಅವರು ನಿರ್ಮಾಪಕರ ಸಂಘದ ಕಟ್ಟಡಕ್ಕೆ ಉದಾರ ದೇಣಿಗೆ ನೀಡಿರುವುದನ್ನು ಸಂಘವು ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಕೃತಜ್ಞತೆ ಹೇಳಿ ಪ್ರಕಟಿಸಿದೆ.
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…