ಆಂದೋಲನ ಪುರವಣಿ

ಸಿನಿಮಾಲ್‌ : ‘ಕಾಂತಾರ’ ಆಸ್ಕರ್ ಅಂಗಳದಲ್ಲಿ

ಮನರಂಜನೋದ್ಯಮದಲ್ಲಿ 3,000 ಕೋಟಿ ರೂ. ಹೂಡಲಿರುವ
ಹೊಂಬಾಳೆ ಸಂಸ್ಥೆಯ ‘ಕಾಂತಾರ’ ಆಸ್ಕರ್ ಅಂಗಳದಲ್ಲಿ


ಹೊಂಬಾಳೆ ಸಂಸ್ಥೆ ನಿರ್ಮಿಸಿರುವ ‘ಕಾಂತಾರ’ ಚಿತ್ರ ಅಕಾಡೆಮಿ ಪ್ರಶಸ್ತಿಗಳ ಸ್ಪರ್ಧೆಗೆ ಅರ್ಹತೆ ಪಡೆದಿರುವ ದೇಶವಿದೇಶಗಳ 301 ಚಿತ್ರಗಳಲ್ಲಿ ಒಂದು. ಇದಕ್ಕಾಗಿ ಸಂಸ್ಥೆ ಹರ್ಷ ವ್ಯಕ್ತಪಡಿಸಿದೆ. ಇದೀಗ ಕಳೆದ ವರ್ಷದ ದಾಖಲೆಗೆ ಹೊಸ ಸೇರ್ಪಡೆ. ಕಳೆದ ವರ್ಷ ಕನ್ನಡ ಚಿತ್ರಗಳ ಮಾರುಕಟ್ಟೆ ಸಾಧ್ಯತೆಯನ್ನು ತೋರಿಸಿಕೊಟ್ಟಿತು. ಅದು ನಿರ್ಮಿಸಿದ ‘ಕೆಜಿಎಫ್ ಚಾಪ್ಟರ್ 2’ ಮತ್ತು ‘ಕಾಂತಾರ’ ಚಿತ್ರಗಳು ಗಲ್ಲಾಪೆಟ್ಟಿಗೆ ಗಳಿಕೆಯಲ್ಲಿ ದಾಖಲೆ ಬರೆಯಿತು. ಕನ್ನಡದಲ್ಲಿ ನಿರ್ಮಿಸಿ, ಇತರ ಭಾಷೆಗಳಿಗೆ ಡಬ್ ಮಾಡುವುದಷ್ಟೇ ಅಲ್ಲದೆ, ಇತರ ಭಾಷೆಗಳಲ್ಲೂ ಹೊಂಬಾಳೆ ಚಿತ್ರಗಳನ್ನು ನಿರ್ಮಿಸುತ್ತಿದೆ. ‘ಮುಂದಿನ 5 ವರ್ಷಗಳಲ್ಲಿ ಮನರಂಜನಾ ಕ್ಷೇತ್ರದಲ್ಲಿ ಸುಮಾರು ಮೂರು ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲು ಉದ್ದೇಶಿಸಿದ್ದೇವೆ’ ಎಂದು ಹೊಂಬಾಳೆಯ ವಿಜಯ್‌ ಕಿರಗಂದೂರು ತಮ್ಮ ನಿರ್ಮಾಣ ಸಂಸ್ಥೆಯ ಜಾಲತಾಣದಲ್ಲಿ ಹೊಸ ವರ್ಷದ ಶುಭಾಶಯ ಕೋರುತ್ತಾ ಪ್ರಕಟಿಸಿದ್ದಾರೆ.
‘ಹೊಂಬಾಳೆ ಫಿಲಮ್ಸ್ ಸಂಸ್ಥೆ ಇಂದು ದೇಶದ ಪ್ರತಿಷ್ಠಿತ ಚಿತ್ರ ನಿರ್ಮಾಣ ಎಂಬ ಹೆಗ್ಗಳಿಕೆ ಪಡೆದಿರುವುದು ಚಿತ್ರ ಪ್ರೇಮಿಗಳ ಬೆಂಬಲದಿಂದ’ ಎಂದಿರುವ ಅವರು, ‘ನಾಡಿನ ಇತಿಹಾಸ, ಪರಂಪರೆ, ಕಲೆ- ಸಂಸ್ಕೃತಿ, ಮತ್ತು ಸಂಪ್ರದಾಯಗಳನ್ನು ವಿಶ್ವಕ್ಕೆ ಪರಿಚಯಿಸುವ ಇನ್ನಷ್ಟು ಉತ್ತಮ ಗುಣಮಟ್ಟದ ಚಲನಚಿತ್ರಗಳನ್ನುನಿರ್ಮಿಸಿ ನಾಡಿಗೆ ಸಮರ್ಪಿಸುವ ಸಂಕಲ್ಪ ಮಾಡಿದ್ದೇವೆ. ಇಂದು ಮನರಂಜನಾ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು ನಮ್ಮ ದೇಶದಲ್ಲಿ ವೈವಿದ್ಯಮಯ ಗುಣಮಟ್ಟದ ಚಿತ್ರ ನಿರ್ಮಾಣಕ್ಕೆ ವಿಫುಲ ಅವಕಾಶವಿದೆ. ದೇಶದ ಯುವಪೀಳಿಗೆಯನ್ನು ಜಾಗೃತಗೊಳಿಸುವ ಮತ್ತು ಹೆಚ್ಚು ಪ್ರೋತ್ಸಾಹಿಸುವ ಸಲುವಾಗಿ ಮನರಂಜನಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಸೇವೆ ಮಾಡಲು ನಾವು ಉದ್ದೇಶಿಸಿದ್ದೇವೆ. ನಾಡಿನ ಜನತೆ ಹೊಂಬಾಳೆ ಫಿಲಮ್ಸ್ ಮೇಲೆ ಇಟ್ಟಿರುವ ನಂಬಿಕೆ, ಭರವಸೆಗಳನ್ನು ಹುಸಿಯಾಗದಂತೆ ನೋಡಿಕೊಳ್ಳಲು ನಾವು ಬದ್ಧರಾಗಿದ್ದು, ಇನ್ನಷ್ಟು ಹೊಸತನದ ವಿಭಿನ್ನ ಚಿತ್ರಗಳನ್ನು ನಿರ್ಮಿಸುವ ಮೂಲಕ ಮನರಂಜನಾ ಕ್ಷೇತ್ರಕ್ಕೆ ಇನ್ನಷ್ಟು ಕೊಡುಗೆ ನೀಡುವ ಸಂಕಲ್ಪ ಮಾಡಿದ್ದೇವೆ’ ಎಂದಿದ್ದಾರೆ.
ಚಿತ್ರ ನಿರ್ಮಾಣ ಮಾತ್ರವಲ್ಲದೆ, ಮನರಂಜನೋದ್ಯಮ ಕ್ಷೇತ್ರಕ್ಕೆ ಬೇರೆ ರೀತಿಯಲ್ಲಿ ಈ ಹೂಡಿಕೆ ಆಗಲಿದೆೆಯೇ ಎನ್ನುವುದರ ಕುರಿತಂತೆ ಅಲ್ಲೇನೂ ಹೇಳಿಲ್ಲ. ಅವರು ನಿರ್ಮಾಪಕರ ಸಂಘದ ಕಟ್ಟಡಕ್ಕೆ ಉದಾರ ದೇಣಿಗೆ ನೀಡಿರುವುದನ್ನು ಸಂಘವು ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಕೃತಜ್ಞತೆ ಹೇಳಿ ಪ್ರಕಟಿಸಿದೆ.

andolanait

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

18 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

18 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago