ಅಣ್ಣ ಜಗ್ಗೇಶ್ ಅವರ ಸಲಹೆಯಂತೆ ಕಳೆದ ಐದು ವರ್ಷಗಳ ಕಾಲ ನಟನೆಯಿಂದ ದೂರವಿದ್ದ ನಟ ಕೋಮಲ್‌ಕುಮಾರ್ ಇದೀಗ ಮತ್ತೆ ಬಣ್ಣ ಹಚ್ಚಿದ್ದಾರೆ. ಅವರು ಅಭಿನಯಿಸುತ್ತಿರುವ ಹೊಸ ಚಿತ್ರದ ಹೆಸರು ‘ಕಾಲಾಯತಸ್ಮೈ ನಮಃ?. ಈ ಚಿತ್ರವನ್ನು ಕೋಮಲ್ ಅವರ ಪತ್ನಿ ಅನುಸೂಯ ನಿರ್ಮಿಸುತ್ತಿದ್ದು, ಮತಿವಣ್ಣನ್ ನಿರ್ದೇಶಿಸುತ್ತಿದ್ದಾರೆ. ಅದರ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ತಂಡಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ನಟ ಪ್ರಕಾಶರೈ ಅಭಿನಯದ ಚಿತ್ರೀಕರಣ ಇಲ್ಲಿ ನಡೆಯುತ್ತಿದೆ ಎಂದು ಚಿತ್ರತಂಡ ಹೇಳಿದೆ. ಎಮಿಲ್ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ.ತಿಲಕ್ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕೋಮಲ್‌ಕುಮಾರ್, ಪ್ರಕಾಶ್‌ರೈ ಅವರೊಂದಿಗೆ ಆಸಿಯಾ ಫಿರ್ದೋಸ್, ಸುಚೀಂದ್ರ ಪ್ರಸಾದ್, ತಿಲಕ್, ಯತಿರಾಜ್ ಜಗ್ಗೇಶ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…