ಹಿರಿಯ ನಟ ದೇವರಾಜ್ ಅವರ ಎರಡನೇ ಮಗ ಪ್ರಣಾಮ್ ದೇವರಾಜ್ ಕೂಡಾ, ಅಣ್ಣ ಪ್ರಜ್ವಲ್‌ರಂತೆ ಬೆಳ್ಳಿತೆರೆಗೆ ಕಾಲಿಟ್ಟವರು. ‘ಕುಮಾರಿ 21 ಎಫ್’ ಚಿತ್ರದ ನಂತರ ಅವರು ಅಭಿನಯಿಸುತ್ತಿರುವ ಚಿತ್ರ ‘ವೈರಂ’. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರಣಾಮ್ ಅವರ ತಂದೆ ದೇವರಾಜ್, ತಾಯಿ ಚಂದ್ರಕಲಾ ದೇವರಾಜ್ ಹಾಗೂ ಅತ್ತಿಗೆ ರಾಗಿಣಿ ಪ್ರಜ್ವಲ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ‘ಚಿಕ್ಕ ವಯಸಿನಿಂದ ಅಪ್ಪ, ಅಣ್ಣನ ಸಿನಿಮಾಗಳನ್ನು ನೋಡಿಕೊಂಡು ಬೆಳೆದವನು. ನಾಲ್ಕು ವರ್ಷಗಳ ನಂತರ ಈ ಸ್ಟೇಜ್ ಮೇಲೆ ನಿಂತು ಮಾತನಾಡುತ್ತಿದ್ದೇನೆ. ನಿರ್ದೇಶಕ ಸಾಯಿ ಶಿವನ್ ಅವರಲ್ಲಿ ತುಂಬಾ ಕಾನ್ಛಿಡೆನ್ಸ್ ಇದೆ. ನಿರ್ಮಾಪಕರಾಗಿ ಮಲ್ಲಿಕಾರ್ಜುನ ಹಾಗೂ ವೇಮಾರೆಡ್ಡಿ ಅವರು ತುಂಬಾ ಬೆಂಬಲ ನೀಡಿದ್ದಾರೆ’ ಎನ್ನುವ ಪ್ರಣಾಮ್ ಅವರೊಂದಿಗೆ ಮೋನಾಲ್, ಶಂಕರ್ ಅಶ್ವಥ್, ವೀಣಾ ಸುಂದರ್, ಗರುಡಾರಾಮ್ ಪ್ರಮುಖ ಪಾತ್ರಧಾರಿಗಳು. ಗೋಪಿನಾಥ್ ಛಾಯಾಗ್ರಹಣ ಹಾಗೂ ಮಹತಿ ಸ್ವರಸಾಗರ್‌ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.
ನಿಶ್ಚಿತ ಕಂಬೈನ್ಸ್‌ಗೆ ಶಿವರಾಜಕುಮಾರ್ ಚಿತ್ರ
ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಮಂಜುಳಾ ಶಿವಾರ್ಜುನ್ ನಿರ್ಮಿಸಲಿರುವ ಹೊಸ ಚಿತ್ರದಲ್ಲಿ ಶಿವರಾಜಕುಮಾರ್ ನಟಿಸಲಿದ್ದಾರೆ. ತಿನ್ ಶಿವಾರ್ಜುನ್ ಸಹನಿರ್ಮಾಣದ ಈ ಚಿತ್ರವನ್ನು ತೇಜಸ್ವಿ ಕೆ.ನಾಗ್‌ನಿರ್ದೇಶಿಸಲಿದ್ದಾರೆ.. ಸೃಜನ ಅವರ ‘ಮಜಾಟಾಕೀಸ್’ ರಿಯಾಲಿಟಿ ಶೋ ಮತ್ತು ‘ಎಲ್ಲಿದ್ದೆ ಇಲ್ಲೀ ತನಕ’ ಚಿತ್ರದ ನಿರ್ದೇಶಕರು ತೇಜಸ್ವಿ. ನಿಶ್ಚಿತ್ ಕಂಬೈನ್ಸ್ ಈ ಹಿಂದೆ ‘ಶಿವಾರ್ಜುನ’ ಚಿತ್ರ ನಿರ್ಮಿಸಿತ್ತು.
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…