ಆಂದೋಲನ ಪುರವಣಿ

ಸಿನಿಮಾಲ್‌ : ತಾರೆ ರಮ್ಯಾ ಚಿತ್ರ-ಸ್ವಾತಿ ಮುತ್ತಿನ ಮಳೆ ಹನಿಯೇ

ಕೆಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದ ತಾರೆ ರಮ್ಯಾ ಮರಳಿದ್ದಾರೆ. ಈ ಬಾರಿ ನಿರ್ಮಾಣದತ್ತ ಅವರ ಆಸಕ್ತಿ. ತಮ್ಮ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ಅವರು ನಿರ್ಮಿಸುತ್ತಿರುವ ಮೊದಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’. ಚಿತ್ರದ ಚಿತ್ರೀಕರಣ ಮುಗಿದು, ಚಿತ್ರೀಕರಣೋತ್ತರ ಕೆಲಸಗಳು ಈಗ ನಡೆಯುತ್ತಿವೆ. ಇದು ಒಂದು ಪ್ರಬುದ್ಧ ಪ್ರೇಮಕಥೆ, ಒಂದು ಭಾವುಕ ಪ್ರಯಾಣ ಎನ್ನಲಾಗಿದ್ದು, ರಾಜ್ ಬಿ. ಶೆಟ್ಟಿ ಈ ಚಿತ್ರವನ್ನು ನಿರ್ದೇಶಿಸುತ್ತಿರುವದಷ್ಟೇ ಅಲ್ಲದೆ, ಮುಖ್ಯಪಾತ್ರಧಾರಿಯೂ ಕೂಡಾ. ಸಿರಿ ರವಿಕುಮಾರ್‌ ಅವರ ಜೋಡಿಯಾಗಿ ನಟಿಸಿದ್ದಾರೆ. ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹಾ ಶರ್ಮಾ, ಜೆ.ಪಿ.ತುಮ್ಮಿನಾಡ್, ಗೋಪಾಲ ಕೃಷ್ಣ ದೇಶಪಾಂಡೆ ತಾರಾಗಣದಲ್ಲಿನ ಇತರರು. ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ ಮತ್ತು ಸಂಕಲನ, ಮಿಥುನ್ ಮುಕುಂದನ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ತಮ್ಮ ನಿರ್ಮಾಣದ ಮೊದಲ ಚಿತ್ರದಲ್ಲಿ ರವ್ಯಾಅವರೇ ನಟಿಸುವುದಾಗಿ ಮೊದಲು ಹೇಳಿದ್ದರೂ, ಕೊನೆಯ ಹಂತದಲ್ಲಿ ಸಿರಿ ರವಿಕುಮಾರ್ ಅವರನ್ನು ಆರಿಸಿದ್ದಾರೆ. ರಮ್ಯಾ ಮತೊಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅದರಲ್ಲಿ ಡಾಲಿ ಧನಂಜಯ್‌ ಜೋಡಿ. ಚಿತ್ರದ ಹೆಸರು ‘ಉತ್ತರಕಾಂಡ’

andolanait

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

4 hours ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

6 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

7 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

7 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

7 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

9 hours ago