ಚೆನೈ: ನಟ ಕಮಲ್ ಹಾಸನ್ ಅವರು ಜ್ವರದಿಂದ ಬಳಲುತ್ತಿದ್ದು ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಮಲ್ ಹಾಸನ್ ಅವರಿಗೆ ಕೆಲ ದಿನಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದಿದ್ದಾರೆ.
ನಟ ಕಮಲ್ ಹಾಸನ್ ಅವರು ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಲ್ತ್ ಚೆಕಪ್ಗಾಗಿ ಕಮಲ್ ಆಸ್ಪತ್ರೆಗೆ ತೆರಳಿದ್ದರು ಎಂದು ಕೂಡ ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ ಅವರಿಗೆ ಜ್ವರ ಕೂಡ ಇತ್ತು, ಹೀಗಾಗಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.”