ಮುಂಬೈ (ಮಹಾರಾಷ್ಟ್ರ): ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟಿ ರಾಖಿ ಸಾವಂತ್ ಅವರ ತಾಯಿ ಜಯಾ ಭೇದಾ (73) ಅವರು ಶನಿವಾರ ರಾತ್ರಿ 9 ಗಂಟೆಗೆ ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಬ್ರೈನ್ ಟ್ಯೂಮರ್ ಮತ್ತು ಕ್ಯಾನ್ಸರ್ ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ನಗರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಶನಿವಾರ ನಿಧನರಾಗಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸಕ್ರಿಯರಾಗಿರುವ ರಾಖಿ ಸಾವಂತ್ ಆಗಾಗ್ಗೆ ತಮ್ಮ ತಾಯಿಯ ಆರೋಗ್ಯದ ಬಗ್ಗೆಯೂ ಮಾಹಿತಿ ಹಂಚಿಕೊಳ್ಳುತ್ತಿದ್ದರು. ಇತ್ತೀಚಿನ ಭಾವನಾತ್ಮಕ ಪೋಸ್ಟ್ ಒಂದರಲ್ಲಿ, ಅವರು ತಮ್ಮ ತಾಯಿಯ ಚೇತರಿಕೆಗೆ ಪ್ರಾರ್ಥಿಸಲು ಅಭಿಮಾನಿಗಳನ್ನು ಕೇಳಿಕೊಂಡಿದ್ದರು. ಅಲ್ಲದೇ ಇತ್ತೀಚೆಗಷ್ಟೇ ಆದಿಲ್ ಖಾನ್ ಜೊತೆಗಿನ ಮದುವೆ ಬಗ್ಗೆ ರಾಖಿ ಸಾವಂತ್ ಸಖತ್ ಸುದ್ದಿಯಾಗಿದ್ದರು. ಆದಿಲ್ ಅವರು ರಾಖಿ ಜೊತೆಗಿನ ಮದುವೆಯನ್ನು ಒಪ್ಪಿಕೊಂಡಿರಲಿಲ್ಲ. ನಂತರ ಅವರು ತಾವು ರಾಖಿ ಅವರೊಂದಿಗೆ ಮದುವೆ ಆಗಿರುವುದಾಗಿ ಸಾರ್ವಜನಿಕವಾಗಿ ಒಪ್ಪಿಕೊಂಡರು ಮತ್ತು ಮದುವೆಯ ಚಿತ್ರವನ್ನೂ ಸಹ ಹಂಚಿಕೊಂಡಿದ್ದರು.