ನವರಸ ನಾಯಕ ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಚಿತ್ರವು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡಿದೆ. ಏ.28ರಂದು ರಿಲೀಸ್ ಆಗಿದ್ದ ಚಿತ್ರದ ಬಗ್ಗೆ ಉತ್ತಮ ಮಾತುಗಳು ಕೇಳಿಬಂದಿತ್ತು.
ಹೊಂಬಾಳೆ ಫಿಲಂಸ್ ಬ್ಯಾನರಿನಲ್ಲಿ ನಿರ್ಮಾಣವಾಗಿದ್ದ ಚಿತ್ರವು ಇದೀಗ ಸದ್ದಿಲ್ಲದೆ ಓಟಿಟಿಗೆ ಬಂದಿದೆ. ಯಶಸ್ವಿ ನಿರ್ದೇಶಕ ಸಂತೋಷ್ ಆನಂದ್ ರಾಮ್ ಆ್ಯಕ್ಷನ್ ಕಟ್ ಹೇಳಿದ್ದ ‘ರಾಘವೇಂದ್ರ ಸ್ಟೋರ್ಸ್’ ಚಿತ್ರವು ಇದೀಗ ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಿದೆ.
ಮದುವೆ ಆಗದ ವ್ಯಕ್ತಿಯೊಬ್ಬನ ಕಥೆಯನ್ನು ಸಂತೋಷ್ ಆನಂದ್ ರಾಮ್ ತೆರೆಗೆ ತಂದಿದ್ದರು. ಚಿತ್ರದಲ್ಲಿ ಜಗ್ಗೇಶ್ ಜೋಡಿಯಾಗಿ ಶ್ವೇತಾ ಶ್ರೀವಾಸ್ತವ್ ಮಿಂಚಿದ್ದು, ತಂದೆ ಪಾತ್ರದಲ್ಲಿ ದತ್ತಣ್ಣ, ಸ್ನೇಹಿತರ ಪಾತ್ರದಲ್ಲಿ ರವಿಶಂಕರ್ ಗೌಡ, ಮಿತ್ರಾ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಕೂಡ ಮುಖ್ಯ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.
ಇನ್ನೂ ಹಲವು ಚಿತ್ರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಚಿತ್ರವನ್ನು ಸದ್ದಿಲ್ಲದೆ ಓಟಿಟಿ ವೇದಿಕೆಯಲ್ಲಿ ಬಿಡುಗಡೆ ಮಾಡಲಾಗಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ 20 ದಿನಗಳಲ್ಲೇ ಓಟಿಟಿಗೆ ಬಂದಿರುವುದು ಹಲವರಿಗೆ ಅಚ್ಚರಿ ಮೂಡಿಸಿದೆ.