Mysore
17
overcast clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಸೀತೆಯಾಗಿ ಸಾಯಿ ಪಲ್ಲವಿ ಬಾಲಿವುಡ್ ಗೆ ಎಂಟ್ರಿ?

ಸಾಯಿ ಪಲ್ಲವಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನುವ ಮಾಹಿತಿ ಇದೆ. ಈ ಹಿಂದೆ ಈ ಪಾತ್ರಕ್ಕೆ ದೀಪಿಕಾ ಪಡುಕೋಣೆ ಹಾಗೂ ಕರೀನಾ ಕಪೂರ್ ಹೆಸರು ಕೇಳಿಬಂದಿತ್ತು. ಆದರೆ ಚಿತ್ರ ನಿರ್ಮಾಪಕರು ಸಾಯಿ ಪಲ್ಲವಿ ಅವರನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಸೌತ್​ ಸೂಪರ್​ ಸ್ಟಾರ್​ ಸಾಯಿ ಪಲ್ಲವಿ ತಮ್ಮ ಅದ್ಭುತ ಅಭಿನಯದಿಂದ ದೊಡ್ಡ ಹೆಸರು ಮಾಡಿದ್ದಾರೆ. ದಕ್ಷಿಣ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಮಿಂಚುತ್ತಿದ್ದಾರೆ. ಆಯ್ದ ಚಿತ್ರಗಳಲ್ಲಿ ಅದ್ಭುತವಾಗಿ ಅಭಿನಯಿಸುವ ಮೂಲಕ ಯುವಜನತೆ ಮಾತ್ರವಲ್ಲದೇ ಎಲ್ಲ ವರ್ಗದ ಪ್ರೇಕ್ಷಕರನ್ನೂ ತಲುಪಿದ್ದಾರೆ. ಇದೀಗ ಈ ಬ್ಯೂಟಿಫುಲ್ ನಟಿಯ ಮುಂದಿನ ಸಿನಿಮಾಗೆ ಸಂಬಂಧಿಸಿದ ಸುದ್ದಿಯೊಂದು ಸಖತ್ ವೈರಲ್ ಆಗಿದೆ. ಸಾಯಿ ಪಲ್ಲವಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರಂತೆ.
ಬಾಲಿವುಡ್​​ ಹೀರೋ ರಣ್​​ಬೀರ್ ಕಪೂರ್ ಜೊತೆ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ. ರಣಬೀರ್ ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಂಡರೆ, ಸಾಯಿ ಪಲ್ಲವಿ ಸೀತೆಯಾಗಿ ಪಾತ್ರ ವಹಿಸಲಿದ್ದಾರೆ. ಈ ಹಿಂದೆ ಈ ಪಾತ್ರಕ್ಕೆ ದೀಪಿಕಾ ಪಡುಕೋಣೆ ಹಾಗೂ ಕರೀನಾ ಕಪೂರ್ ಹೆಸರು ಕೇಳಿ ಬಂದಿತ್ತು. ಆದರೆ ಚಿತ್ರ ನಿರ್ಮಾಪಕರು ಸಾಯಿ ಪಲ್ಲವಿ ಅವರನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ.ಇನ್ನೂ ಹೃತಿಕ್ ರೋಷನ್ ಈ ಸಿನಿಮಾದಲ್ಲಿ ರಾವಣನ ಪಾತ್ರ ಮಾಡಲಿದ್ದಾರೆ. ರಾಮಾಯಣ ಆಧಾರಿತ ಈ ಸಿನಿಮಾದ ಚಿತ್ರೀಕರಣ ಮುಂದಿನ ವರ್ಷ ಆರಂಭವಾಗಲಿದ್ದು, ಈ ಯೋಜನೆಯ ಅಧಿಕೃತ ವಿವರಗಳು ಶೀಘ್ರದಲ್ಲೇ ಬಹಿರಂಗಗೊಳ್ಳಲಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!