ಹ್ಯಾಟ್ರಿಕ್ ಹೀರೋ ಶಿವಣ್ಣರ 125ನೇ ಸಿನಿಮಾ ‘ವೇದ’ ಫಸ್ಟ್ ಲುಕ್ ಬಿಡುಗಡೆ

ಬೆಂಗಳೂರು: ಸ್ಯಾಂಡಲ್ ವುಡ್  ನ ಪ್ರಖ್ಯಾತ ನಟ ಶಿವರಾಜ್ ಕುಮಾರ್ ಅಭಿನಯದ 125ನೇ ಸಿನಿಮಾ ವೇದ ಸಿನಿಮಾದ ಫಸ್ಟ್ ಲುಕ್ ಅನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಡುಗಡೆ ಮಾಡಲಾಗಿದೆ.

ಸಿನಿಮಾವನ್ನು ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಪಿಚ್ಚರ್ ಬ್ಯಾನರ್ ಅಡಿ ನಿರ್ಮಾಣ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ಅಸ್ವಿನಿ ಪುನೀತ್ ರಾಜಕುಮಾರ್, ದುನಿಯಾ ವಿಜಯ್, ನಿರ್ಮಾಪಕ ಜಯಣ್ಣ ಭೋಗೇಂದ್ರ, ಸಂದೇಶ್ ನಾಗರಾಜ್, ರಾಕ್ ಲೈನ್ ವೆಂಕಟೇಶ್, ಸಂಗೀತ ನಿರ್ದೇಶಕ ಗುರುಕಿರಣ್, ಅರ್ಜುನ್ ಜನ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.