ಕಳೆದ ಒಂದು ವಾರದಿಂದ ಈರುಳ್ಳಿ ದರ ಸತತವಾಗಿ ಏರಿಕೆಯಾಗುತ್ತಿದೆ. ಕಳೆದ ಶನಿವಾರ ಕೆ.ಜಿ.ಗೆ 40 ರೂ. ಇದ್ದ ಈರುಳ್ಳಿಗೆ ಈಗ 60 ರೂ.ಗಳಿಗೆ ಏರಿಕೆಯಾಗಿದೆ. ಕ್ವಿಂಟಾಲ್‌ಗೆ ಗರಿಷ್ಟ 3,000 ರೂ.ಗಳಿಂದ 4,000 ರೂ. ಇದ್ದ ಬೆಲೆಯು 5,200 ರೂ.ಗಳಿಗೆ ತಲುಪಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರತಿ ಬುಧವಾರ ಮತ್ತು ಶನಿವಾರ ಹರಾಜು ಪ್ರಕ್ರಿಯೆ ನಡೆಯುತ್ತದೆ. ಕಳೆದ ಬುಧವಾರ (ಸೆ.11) ಕ್ವಿಂಟಾಲ್ ಗೆ ಕನಿಷ್ಠ 3,000 ರೂ. ಗರಿಷ್ಟ 5,000 ರೂ. ಇತ್ತು. ಆದರೆ ಮೂರು ದಿನಗಳ ಅಂತರದಲ್ಲಿ ಮತ್ತೆ 200 ರೂ. ಏರಿಕೆಯಾಗಿದೆ. ಶ್ರಾವಣ ಮಾಸ ಮುಗಿದ ಬಳಿಕ ಮಾಂಸಾಹಾರ ಹೋಟೆಲ್, ರೆಸ್ಟೋರೆಂಟ್, ಬಾರ್‌ಗಳಲ್ಲಿ ಈರುಳ್ಳಿಗೆ ಬೇಡಿಕೆ ಹೆಚ್ಚಾಗಿರು ವುದರಿಂದ ಈರುಳ್ಳಿ ದರದಲ್ಲಿ ನಿರಂತರವಾಗಿ ಏರಿಕೆ ಕಂಡು ಬಂದಿದೆ. ಅಲ್ಲದೆ ಈ ಬಾರಿ ಉತ್ತರ ಭಾರತದಲ್ಲಿ ಅತಿವೃಷ್ಟಿಯಿಂದಾಗಿ ಈರುಳ್ಳಿ ಫಸಲು ಹಾಳಾಗಿದ್ದು, ಗುಜರಾತ್, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶಕ್ಕೆ ಹೆಚ್ಚು ರವಾನೆಯಾಗುತ್ತಿದೆ. ಅಲ್ಲದೆ ಮುಂಬೈ, ಪುಣೆ, ಸೂರತ್, ದೆಹಲಿ ಮುಂತಾದ ನಗರಗಳಲ್ಲೂ ಬೇಡಿಕೆ ಹೆಚ್ಚಾಗಿರುವುದರ ಜತೆಗೆ ಈ ಬಾರಿಯ ಮುಂಗಾರು ಫಸಲು ಇನ್ನೂ ಮಾರುಕಟ್ಟೆಗೆ ಬಂದಿಲ್ಲದ ಪರಿಣಾಮ ದರ ಏರಿಕೆಯಾಗಿದೆ ಎನ್ನುತ್ತಾರೆ ಎಪಿಎಂಸಿ ಅಧಿಕಾರಿಗಳು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…