Mysore
26
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ತೆಂಗಿನಕಾಯಿಯ ಬೆಲೆಯು ಏರುತ್ತಿದೆ

ತೆಂಗಿನಕಾಯಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರೈತರಿಗೆ ಉತ್ತಮ ಬೆಲೆ ಸಿಗುತ್ತಿದೆ. ಮುಂದಿನ ಬೇಸಿಗೆ ಹೊತ್ತಿಗೆ ದರ ಮತ್ತಷ್ಟು ದುಬಾರಿಯಾಗಲಿದೆಯಂತೆ. ತೆಂಗಿನಕಾಯಿಗಳ ಗಾತ್ರಕ್ಕೆ ಅನುಗುಣವಾಗಿ ಮಾರುಕಟ್ಟೆಯಲ್ಲಿ ಬೆಲೆ ನಿಗದಿ ಯಾಗುತ್ತಿದೆ. ಸಣ್ಣ ಗಾತ್ರದ ಕಾಯಿ ಗಳು ೨೦-೨೨ ರೂ.ಗಳಿಗೆ ಮಾರಾಟವಾಗುತ್ತಿದ್ದರೆ, ಮಧ್ಯಮ ಗಾತ್ರದ ತೆಂಗಿನ ಕಾಯಿ ಗಳು ೨೫ ರೂ., ದೊಡ್ಡ ಗಾತ್ರದ ಕಾಯಿಗೆ ೩೦ ರೂ.ವರೆಗೂ ಬೆಲೆ ಸಿಗುತ್ತಿದೆ. ಸಂತೆಗಳಲ್ಲಿ ಕೆ.ಜಿ.ಲೆಕ್ಕದಲ್ಲೂ ಖರೀದಿಸುತ್ತಿದ್ದು, ಒಂದು ಕೆ.ಜಿ.ಗೆ ೫೭ ರೂ.ಗಳಿಂದ ೬೦ ರೂ.ವರೆಗೂ ಬೆಲೆ ಏರಿಕೆಯಾಗಿದೆ.

೨೦೨೩ರಲ್ಲಿ ತೀವ್ರ ಬರದಿಂದ ರೈತರು ಮರಗಳನ್ನು ಉಳಿಸಿಕೊಳ್ಳುವುದೇ ಕಷ್ಟಕರವಾಗಿತ್ತು. ಕಳೆದ ವರ್ಷ ಉತ್ತಮ ಮಳೆಯಾಗಿದ್ದರೂ ಮರಗಳು ಇನ್ನೂ ಚೇತರಿಸಿಕೊಂಡಿಲ್ಲ. ಎಳನೀರಿಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಸಾಕಷ್ಟು ರೈತರು ಎಳನೀರು ಮಾರಾಟ ಮಾಡುತ್ತಿದ್ದಾರೆ. ತೆಂಗಿನ ಉಪ ಉತ್ಪನ್ನಗಳ ತಯಾರಿಕೆ ಮತ್ತು ಬಳಕೆಯೂ ಹೆಚ್ಚಾಗಿದೆ. ಇದು ಕೂಡ ಬೆಲೆ ಏರಿಕೆಗೆ ಕಾರಣವಾಗಿದೆ. ಹಿಂದಿನ ವರ್ಷಗಳಲ್ಲಿ ಕೊಬ್ಬರಿ ಬೆಲೆ ಕ್ವಿಂಟಾಲ್‌ಗೆ ೧೦ ಸಾವಿರ ರೂ.ಗಳಿಗಿಂತ ಕಡಿಮೆ ಇತ್ತು. ಬೆಲೆ ಕುಸಿತದಿಂದ ಕಂಗಾಲಾದವರು ತೆಂಗಿನ ಮರಗಳ ಜಾಗದಲ್ಲಿ ಅಡಕೆ ಸಸಿಗಳನ್ನು ನೆಟ್ಟಿದ್ದಾರೆ. ಇಂತಹ ಹಲವು ಕಾರಣಗಳಿಂದ ತೆಂಗು ಉತ್ಪಾದನೆ ಕುಸಿಯುತ್ತಲೇ ಸಾಗಿದ್ದು, ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ.

Tags:
error: Content is protected !!