ತೆಂಗಿನಕಾಯಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರೈತರಿಗೆ ಉತ್ತಮ ಬೆಲೆ ಸಿಗುತ್ತಿದೆ. ಮುಂದಿನ ಬೇಸಿಗೆ ಹೊತ್ತಿಗೆ ದರ ಮತ್ತಷ್ಟು ದುಬಾರಿಯಾಗಲಿದೆಯಂತೆ. ತೆಂಗಿನಕಾಯಿಗಳ ಗಾತ್ರಕ್ಕೆ ಅನುಗುಣವಾಗಿ ಮಾರುಕಟ್ಟೆಯಲ್ಲಿ ಬೆಲೆ ನಿಗದಿ ಯಾಗುತ್ತಿದೆ. ಸಣ್ಣ ಗಾತ್ರದ ಕಾಯಿ ಗಳು ೨೦-೨೨ ರೂ.ಗಳಿಗೆ ಮಾರಾಟವಾಗುತ್ತಿದ್ದರೆ, ಮಧ್ಯಮ ಗಾತ್ರದ ತೆಂಗಿನ ಕಾಯಿ ಗಳು ೨೫ ರೂ., ದೊಡ್ಡ ಗಾತ್ರದ ಕಾಯಿಗೆ ೩೦ ರೂ.ವರೆಗೂ ಬೆಲೆ ಸಿಗುತ್ತಿದೆ. ಸಂತೆಗಳಲ್ಲಿ ಕೆ.ಜಿ.ಲೆಕ್ಕದಲ್ಲೂ ಖರೀದಿಸುತ್ತಿದ್ದು, ಒಂದು ಕೆ.ಜಿ.ಗೆ ೫೭ ರೂ.ಗಳಿಂದ ೬೦ ರೂ.ವರೆಗೂ ಬೆಲೆ ಏರಿಕೆಯಾಗಿದೆ.
೨೦೨೩ರಲ್ಲಿ ತೀವ್ರ ಬರದಿಂದ ರೈತರು ಮರಗಳನ್ನು ಉಳಿಸಿಕೊಳ್ಳುವುದೇ ಕಷ್ಟಕರವಾಗಿತ್ತು. ಕಳೆದ ವರ್ಷ ಉತ್ತಮ ಮಳೆಯಾಗಿದ್ದರೂ ಮರಗಳು ಇನ್ನೂ ಚೇತರಿಸಿಕೊಂಡಿಲ್ಲ. ಎಳನೀರಿಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಸಾಕಷ್ಟು ರೈತರು ಎಳನೀರು ಮಾರಾಟ ಮಾಡುತ್ತಿದ್ದಾರೆ. ತೆಂಗಿನ ಉಪ ಉತ್ಪನ್ನಗಳ ತಯಾರಿಕೆ ಮತ್ತು ಬಳಕೆಯೂ ಹೆಚ್ಚಾಗಿದೆ. ಇದು ಕೂಡ ಬೆಲೆ ಏರಿಕೆಗೆ ಕಾರಣವಾಗಿದೆ. ಹಿಂದಿನ ವರ್ಷಗಳಲ್ಲಿ ಕೊಬ್ಬರಿ ಬೆಲೆ ಕ್ವಿಂಟಾಲ್‌ಗೆ ೧೦ ಸಾವಿರ ರೂ.ಗಳಿಗಿಂತ ಕಡಿಮೆ ಇತ್ತು. ಬೆಲೆ ಕುಸಿತದಿಂದ ಕಂಗಾಲಾದವರು ತೆಂಗಿನ ಮರಗಳ ಜಾಗದಲ್ಲಿ ಅಡಕೆ ಸಸಿಗಳನ್ನು ನೆಟ್ಟಿದ್ದಾರೆ. ಇಂತಹ ಹಲವು ಕಾರಣಗಳಿಂದ ತೆಂಗು ಉತ್ಪಾದನೆ ಕುಸಿಯುತ್ತಲೇ ಸಾಗಿದ್ದು, ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…