ಹಾಡು ಪಾಡು

ಉಗಾದಿಯ ಮಧ್ಯಾಹ್ನ ಮಂಟೇಸ್ವಾಮಿಯವರ ಐಭೋಗ

ದಿಲೀಪ್ ಎನ್ಕೆ

ಮಂಟೇಸ್ವಾಮಿ ತಾವು ಜಂಗಮರಾಗಿ ಅಲೆದಾಡಿದ ಕಡೆಗಳಲ್ಲೆಲ್ಲ ಅರಿವು ಎಂಬ ಪರಂಜ್ಯೋತಿಯನ್ನು ಬೆಳಗುತ್ತಾ ನಡೆದವರು. ಧರೆಗೆ ದೊಡ್ಡವರು, ಕಂಡಾಯದ ಒಡೆಯ, ನೀಲಗಾರರ ಆದಿಗುರು. ಮೇಲಾಗಿ ಅಲ್ಲಮಪ್ರಭುವಿನ ಉತ್ತರಾಧಿಕಾರಿಯಾಗಿ ಬಂದಂತಹ ಶ್ರೇಷ್ಠ ಕಾಲಜ್ಞಾನಿ. ಈ ಯುಗಾದಿ ಹಬ್ಬಕ್ಕೂ ಈ ಮಂಟೇಸ್ವಾಮಿಯವರಿಗೂ ಏನು ಸಂಬಂಧ? ಸಂಬಂಧ ಇದೆ. ಇದೇ ಯುಗಾದಿ ಹಬ್ಬದ ದಿನದಂದು ಸರಿಸುಮಾರು ಸಂಜೆಯಷ್ಟರ ಹೊತ್ತಿಗೆ ಈ ಮಂಟೇಸ್ವಾಮಿಯವರ ಐಭೋಗದ ಹೂವು ಹೊಂಬಾಳೆಯಿಂದ ಅಲಂಕೃತಗೊಂಡ ಕಂಡಾಯವು ನೀಲಗಾರರು, ದೇವರ ಗುಡ್ಡರು, ಮಂಟೇಸ್ವಾಮಿ – ಸಿದ್ದಪ್ಪಾಜಿ ಒಕ್ಕಲಿನವರ ಮುಂದಾಳುತನದಲ್ಲಿ ಊರುಕೇರಿಯನ್ನು ಪ್ರವೇಶಿಸುತ್ತದೆ.

ಅದುವೇ ನಮಗೆ ಯುಗಾದಿ. ಅದುವೇ ನಮ್ಮ ಯುಗಾದಿ ಹಬ್ಬದ ಮಹಿಮೆ. ಈ ಮೇಲೆ ಹೇಳಿದ ನೀಲಗಾರರು, ದೇವರಗುಡ್ಡರು, ಮಂಟೇಸ್ವಾಮಿ – ಸಿದ್ದಪ್ಪಾಜಿ ಒಕ್ಕಲಿನವರು ಹತ್ತು ಹನ್ನೆರಡು ದಿನಗಳ ಹಿಂದೆಯೇ ಕಪ್ಪಡಿ ಶ್ರೀ ಕ್ಷೇತ್ರಕ್ಕೆ ಭೇಟಿಕೊಟ್ಟು, ಅಲ್ಲಿನ ಕಡೇ ದಿನದ ‘ಮಾದಲಿ ಸೇವೆ’ಯನ್ನೂ ನಂತರದ ದಿನದ ರಾಚಪ್ಪಾಜಿ ಚೆನ್ನಾಜಮ್ಮರ ಗದ್ದುಗೆಗೆ ಮಾಡುವ ಎಳನೀರಿನ ಮಜ್ಜನವನ್ನೂ ಮುಗಿಸಿ ಹೊರಟಂತಹವರು. ಅಲ್ಲಿಂದ ಹೊರಟು, ಮುಟ್ಟನಹಳ್ಳಿಯಲ್ಲಿರುವ ದೊಡ್ಡಮ್ಮತಾಯಿ ತೋಪಿನಲ್ಲಿ ಸೇರಿ ಬೊಪ್ಪೇಗೌಡನಪುರದ ಮಂಟೇಸ್ವಾಮಿಯ ಮಠ ವನ್ನು ಪ್ರವೇಶಿಸಿ, ಅಲ್ಲಿ ‘ಕಟ್ನಳ್ಕ ಬ್ಯಾಳ’ ಪ್ರಸಾದವನ್ನು ಸ್ವೀಕರಿಸಿ ಹೊರಟು ಬಂದಂಥವರು. ಅಲ್ಲಿಂದ ತಮ್ಮ ತಮ್ಮ ಊರುಗಳ ದಾರಿ ಹಿಡಿದು ಬಂದು, ಊರಿನ ಹೊರಭಾಗದಲ್ಲಿ ಅಲ್ಲಲ್ಲಿ ತಂಗಿದ್ದು ಯುಗಾದಿಯ ದಿನವಾದ ಇಂದು ಕಾವೇರಿ ಪವಿತ್ರ ಜಲದಲ್ಲಿ ಮಿಂದುಟ್ಟು, ಕಂಡಾಯವನ್ನು ಶುಚಿಗೊಳಿಸಿ ಪೂಜೆ ಪುನಸ್ಕಾರಗಳನ್ನು ನೆರವೇರಿಸಿ, ಆಮೇಲೆ ಊರನ್ನು ಪ್ರವೇಶಿಸುತ್ತಾರೆ.

ಇವರು ಈ ಕೈಂಕರ್ಯವನ್ನೆಲ್ಲ ಮುಗಿಸಿ ಯುಗಾದಿಯ ದಿನದಂದು ಊರು-ಕೇರಿಯನ್ನು ಪ್ರವೇಶಿಸುವ ಹೊತ್ತಿಗೆ ಹೆಚ್ಚೂಕಡಿಮೆ ಮಧ್ಯಾಹ್ನ ಕಳೆದಿರುತ್ತದೆ. ಕಂಡಾಯದ ಉತ್ಸವದೊಂದಿಗೆ ಬರುವ ಜನರ ಪಾದಗಳು ತಣ್ಣಗಾಗಲಿ ಎಂದು ರಸ್ತೆ ರಸ್ತೆಗಳಲ್ಲಿ ಹಾಕಿದ ಮಣ್ಣು ನೀರಿನಿಂದಾಗಿ ಎದ್ದು, ತನ್ನ ಘಮಲಿಂದ ಮತ್ತೇರಿಸುತ್ತಿರುತ್ತದೆ. ಮನೆಮನೆಯಲ್ಲೆಲ್ಲಾ ತಳಿರು-ತೋರಣಗಳು, ಮನೆಯ ಮುಂದೆಲ್ಲಾ ವಯ್ಯಾರದ ರಂಗೋಲಿಗಳು, ಕತ್ತೆತ್ತಿದ್ದರೆ ಜಿಲಿಜಿಲಿ ಬಣ್ಣದ ಪೇಪರ್‌ಗಳ ದಾಳಗಳು, ಅನುಕೂಲಕ್ಕೆ ತಕ್ಕಂತೆ ಹೊಸ ಬಟ್ಟೆ ಧರಿಸಿ ಕಿಲುಗುಟ್ಟುವ ಮಕ್ಕ ಮರಿಗಳು. ಅಲ್ಲಲ್ಲಿ ನವವಧುವಿನಂತೆ ಸಿಂಗಾರಗೊಂಡ ಹೊನ್ನೇರುಗಳು, ಎತ್ತುಗಳಿಗೆ ಬಳಿದ ಬಣ್ಣಗಳು, ಕೊಂಬಿನಲ್ಲಿ ರಾರಾಜಿಸುವ ಕುಚ್ಚುಗಳು ಗುನ್ನಂಪಟಗಳು ಬರುವ ಭಕ್ತಾದಿಗಳು ದಣಿವಾರಿಸಿಕೊಳ್ಳಲು ಮನೆ ಮನೆಗಳ ಜಗುಲಿಯ ಮೇಲೆ ಪಾನಕ, ಶರಬತ್ತು, ಕೋಸಂಬರಿ, ಬೆಲ್ಲದ ಅನ್ನ, ಮೊಸರನ್ನದ ಅಂಡೆ, ಗುಂಡಿ, ಕಡಾಯಗಳು ಕಾಯುತ್ತವೆ. ಅದೋ… ವಾಲಗ ಕೇಳುತ್ತಿದೆ.

ಮಂಟೇಸ್ವಾಮಿಯವರ ಐಭೋಗದ ಹೂವು- ಹೊಂಬಾಳೆಯಿಂದ ಅಲಂಕೃತಗೊಂಡ ಕಂಡಾಯವು ನೀಲಗಾರರು, ದೇವರಗುಡ್ಡರು ಭಕ್ತಾದಿಗಳ ಮುಂದಾಳುತನದಲ್ಲಿ ಊರೊಳಕ್ಕೆ ಧಾವಿಸಿತು. ಕಂಡಾಯಕ್ಕೆ ಕೈ ಮುಗಿದು ಅಡ್ಡ ಬೀಳುವವರೆಷ್ಟೋ, ಹಣ್ಣು-ಕಾಯಿ ಮಾಡಿಸುವವರೆಷ್ಟೋ! ಕಂಡಾಯವನ್ನು ಹೊತ್ತವರು ನಮ್ಮನ್ನು ದಾಟಿದರೆ ಕಪ್ಪಡಿ, ಬೊಪ್ಪಣಪುರಕ್ಕೇ ಹೋಗಿ ಬಂದಂತೆ ಎಂದು ದಾರಿಗುಂಟ ಮಗ್ಗುಲಲ್ಲಿ ಮಲಗುವ ಮಕ್ಕ ಮರಿಗಳು, ಯಮ್ಕಗಳು, ಗಂಡಸರು… ಆ ವಾಲಗದ ತಲೆದೂಗಿಸುವ ಸದ್ದಿಗೆ ಥರಾವರಿ ಹೆಜ್ಜೆಯ ಮಾರಿಕುಣಿತ ಕುಣೀತಾ ಹೆಣ್ಣುಗಳ ಕಣ್ಣು ಸೆಳೆಯಲೆತ್ನಿಸುವ ಪೋರರು, ನಾಚಿಕೆಯಿಂದಲೇ ವಯ್ಯಾರ ಮಾಡುವ ಪೋರೀರು ಯುಗಾದಿಯ ದಿನ ಊರುಕೇರಿ ಎಲ್ಲವೂ ಫಳ್ ಫಳ್ ಫಳಾರ್ ಎನ್ನುತ್ತಿರುತ್ತದೆ.

” ಇಂದು ಅಪರಾಹ್ನದ ಹೊತ್ತು ಮಂಟೇಸ್ವಾಮಿ ಯವರ ಕಂಡಾಯವು ಊರುಕೇರಿಯನ್ನು ಪ್ರವೇಶಿಸುತ್ತದೆ. ಇದುವೇ ನಮಗೆ ಯುಗಾದಿ” 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

57 mins ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

58 mins ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

60 mins ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

1 hour ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

1 hour ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

1 hour ago