ಭೌತಶಾಸ್ತ್ರ ಶಿಕ್ಷಕ ಮೋಹನ್ ಕುಮಾರ್ ಅವರ ಕಲಾ ಪ್ರೀತಿ
– ರಾಜೇಂದ್ರ ಎಸ್, ಮಹದೇವಪುರ
ವೃತ್ತಿಯಲ್ಲಿ ಭೌತಶಾಸ್ತ್ರ ಶಿಕ್ಷಕರು. ಸದ್ಯ ಮೈಸೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಮೈಸೂರು ತಾಲ್ಲೂಕು ವಲಯದ ಶಿಕ್ಷಣ ಸಂಯೋಜಕರಾಗಿ ಸೇವೆ. ಇದರೊಂದಿಗೆ ರೇಖಾ ಚಿತ್ರಗಳನ್ನು ಬಿಡಿಸುವಲ್ಲಿ ಪರಿಣತರು ಯು.ಜಿ. ಮೋಹನ್ ಕುಮಾರ ಆರಾಧ್ಯ.
ಮಕ್ಕಳಿಗೆ ಗುರುತ್ವ, ಅಯಸ್ಕಾಂತ, ವೇಗ, ಚಲನೆ ಸೇರಿ ಭೌತ ವಿಜ್ಞಾನದ ಬಗ್ಗೆ ಪಾಠ ಮಾಡುವುದರ ಜೊತೆಗೆ ಕಲೆಯ ಬಗ್ಗೆಯೂ ಆಸಕ್ತಿ ಮೂಡುವಂತೆ ಮಾಡುತ್ತಿರುವ ಮೋಹನ್ ಕುಮಾರ್ ಅವರು ಸ್ವತಃ ಸಾವಿರಾರು ರೇಖಾಚಿತ್ರಗಳನ್ನು ರಚಿಸಿದ್ದಾರೆ.
ಸಾಹಿತಿಗಳು, ವಿಜ್ಞಾನಿಗಳು, ಪ್ರಸಿದ್ಧ ವ್ಯಕ್ತಿಗಳ ರೇಖಾಚಿತ್ರಗಳನ್ನು ಬಿಡಿಸಲು ನಿತ್ಯವೂ ೩ ಗಂಟೆಗಳನ್ನು ವಿನಿಯೋಗಿಸುವ ಮೋಹನ್ ಕುಮಾರ್ ಈ ಮೂಲಕ ಮಕ್ಕಳಿಗೆ ಸಾಧಕರ ಪರಿಚಯ ಮಾಡಿಕೊಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ನಿತ್ಯವೂ ಒಬ್ಬೊಬ್ಬ ಸಾಧಕರ ಚಿತ್ರ ರಚಿಸಿ ಅದರೊಂದಿಗೆ ಅವರ ಬಗ್ಗೆ ಪುಟ್ಟದೊಂದು ಟಿಪ್ಪಣಿ ಬರೆದು ಎಲ್ಲ ಕಡೆ ಹಂಚುತ್ತಿದ್ದಾರೆ.
೧,೦೦೦ಕ್ಕೂ ಹೆಚ್ಚು ಸಾಧಕ ವ್ಯಕ್ತಿಗಳ ಚಿತ್ರಗಳನ್ನು ರಚಿಸಿರುವ ಇವರು ೫೦ಕ್ಕೂ ಹೆಚ್ಚು ಕಡೆಗಳಲ್ಲಿ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ನೀಡಿದ್ದಾರೆ. ಮಕ್ಕಳ, ಸಮಾಜ ಅರಿವು ಹೆಚ್ಚಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿರುವ ಇವರಿಗೆ ೨೦೧೭ರ ದಸರಾ ಪ್ರಶಸ್ತಿ, ಮೈಸೂರು ರೋಟರಿ ಕ್ಲಬ್ ವತಿಯಿಂದ ಸೋಂಪುರ ಬಸಪ್ಪ ಆದರ್ಶ ಶಿಕ್ಷಕ ಪ್ರಶಸ್ತಿ, ಮೈಸೂರು ಲಯನ್ಸ್ ಕ್ಲಬ್ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…